ಪೊಸೋಟು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಅಪಘಾತ ಹೊಸಂಗಡಿ ಕಜೆ ನಿವಾಸಿ ದಾರುಣ ಸಾವು

ಮಂಜೇಶ್ವರ : ಪೊಸೋಟು ರಾಷ್ಟ್ರೀಯ ಹೆದ್ದಾರಿಯ ರಸ್ತೆ ದಾಟಲು ಸರ್ವೀಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಜಿಗಿದಾಗ ಕಾರೊಂದು ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾನೆ.

ಬಂಗ್ರ ಮಂಜೇಶ್ವರ ವಾಮಂಜೂರು ಕಜೆ ನಿವಾಸಿ ಸಾದಿಕ್ ಅಪಘಾತದಲ್ಲಿ ಸಾವನ್ನಪ್ಪಿದ ಯುವಕನಾಗಿದ್ದಾನೆ.

ಸೋಮವಾರ ರಾತ್ರಿ 10.30 ಗಂಟೆಯ ಸುಮಾರಿಗೆ ತಲಪಾಡಿಯಿಂದ ಕಾಸರಗೋಡಿಗೆ ತೆರಳುತಿದ್ದ ಇನೋವಾ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.


ಮಂಜೇಶ್ವರ ಠಾಣೆಯಲ್ಲಿ ಕೇಸು ದಾಖಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!