ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಮಂಗಳೂರು- ಬೆಂಗಳೂರು ರಸ್ತೆ ಮಧ್ಯೆ ಬಿಸಿರೋಡು ಜಂಕ್ಷನ್ ನಲ್ಲಿ ನಿತ್ಯ ಟ್ರಾಫಿಕ್ ಜಾಮ್ ಸಮಸ್ಯೆಯಾಗುತ್ತಿದೆ ಎಂಬುದರ ಕುರಿತು ವ್ಯಕ್ತಿಯೋರ್ವರು ಮಾಡಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣದ ಮೂಲಕ ವೈರಲ್ ಆಗಿದೆ.ಖಾಲಿದ್ ನಂದಾವರ ಎಂಬವರು ಕಾರಿನಲ್ಲಿ ಸಂಚರಿಸುವ ವೇಳೆ ರಸ್ತೆಯ ಮೇಲೆ ನಿಲ್ಲಿಸಿ ಟ್ರಾಫಿಕ್ ಜಾಮ್ ಸಮಸ್ಯೆಗೆ ಕಾರಣವಾಗಿದ್ದ ವಾಹನಗಳ ವಿಡಿಯೋ ಮಾಡಿದ್ದಲ್ಲದೆ, ಸಾಮಾಜಿಕ ಜಾಲತಾಣದ ಮೂಲಕ ವೈರಲ್ ಮಾಡಿದ್ದಾರೆ.
ಬಿಸಿರೋಡಿನಲ್ಲಿ ಇತ್ತೀಚಿಗೆ ನಿರ್ಮಾಣವಾದ ಬಾವ ಬಿಲ್ಡರ್ ನವರ ಸ್ಮಾರ್ಟ್ ಸಿಟಿ ಕಾಂಪ್ಲೆಕ್ಸ್ ಮುಂಭಾಗದಿಂದ ಬಿಸಿರೋಡು ಬಸ್ ತಂಗುದಾಣದವರೆಗೆ ರಸ್ತೆ ಬದಿಯಲ್ಲಿ ಸಾರ್ವಜನಿಕರು ವಾಹನಗಳನ್ನು ನಿಲ್ಲಿಸಿ ಅಂಗಡಿಗಳಿಗೆ ತೆರಳುತ್ತಾರೆ ಎಂದು ಆತ ಹೇಳಿದ್ದಾನೆ.ಸಂಜೆ ವೇಳೆಯಂತೂ ಸ್ಮಾರ್ಟ್ ಸಿಟಿ ಮುಂಭಾಗದಲ್ಲಿ ವಾಹನಗಳು ರಸ್ತೆ ಮೇಲೆ ನಿಲ್ಲಿಸಲಾಗುತ್ತಿದ್ದು, ಪಾದಾಚಾರಿಗಳಿಗೂ ನಡೆದಾಡಲೂ ಸಾಧ್ಯವಿಲ್ಲದಂತೆ ಸಮಸ್ಯೆಗಳು ಉಂಟಾಗುತ್ತಿವೆ.
ಆದರೂ ಟ್ರಾಫಿಕ್ ಪೋಲೀಸರು ಮೌನವಾಗಿರುವುದರ ಹಿಂದೆ ಸಾರ್ವಜನಿಕ ವಲಯದಲ್ಲಿ ಸಂಶಯ ಮೂಡತೊಡಗಿದೆ.