ಶ್ರೀ ಕ್ಷೇತ್ರ ಪೊಳಲಿಗೆ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಭೇಟಿ

ಪೊಳಲಿ: ಕರ್ನಾಟಕ ಸರಕಾರದ ಉಚ್ಚ ನ್ಯಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿಗಳಾದ ವೇದವ್ಯಾಸಾಚಾರ್ ಶ್ರೀಶಾನಂದ ಅವರು ಏಪ್ರಿಲ್ 4ರಂದು ಶನಿವಾರ ಶ್ರೀ ಕ್ಷೇತ್ರ ಪೊಳಲಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ವೇಳೆ ದೇವಾಲಯದ ಅರ್ಚಕರಾದ ಅನಂತಪದ್ಮನಾಭ ಭಟ್ ಅವರು ಪ್ರಸಾದ ನೀಡಿ ದೇವಾಲಯದ ಇತಿಹಾಸ ಹಾಗೂ ವಿಶೇಷತೆಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ದೇವಾಲಯದ ಅಚ್ಚುಕ ಆದರ್ಶ್ ಭಟ್, ಕಾರ್ಯನಿರ್ವಹಣಾಧಿಕಾರಿ ಕೆ.ಪಿ. ಚಂದ್ರಮೋಹನ್ ಹಾಗೂ ಮಾಜಿ ಧಾರ್ಮಿಕ ಪರಿಷತ್ ಸದಸ್ಯ ಪೊಳಲಿ ಗಿರಿಪ್ರಕಾಶ್ ತಂತ್ರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!