ಮಂಜೇಶ್ವರ (ಮಂಗಲ್ಪಾಡಿ):
ಡಾ. ಬಿ.ಆರ್ ಅಂಬೇಡ್ಕರ್ ಗ್ರಾಮ ವಿಕಸನ ಮತ್ತು ಕಲಾವೇದಿಕೆ, ಮಂಗಲ್ಪಾಡಿ ವತಿಯಿಂದ ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ಅವರ 137ನೇ ಜನ್ಮದಿನ ಹಾಗೂ ಕಲಾವೇದಿಕೆಯ 29ನೇ ವಾರ್ಷಿಕೋತ್ಸವವನ್ನು ಏಪ್ರಿಲ್ 11, 2026ರಂದು ಶನಿವಾರ ರಾತ್ರಿ 8 ಗಂಟೆಗೆ ವೈಭವದಿಂದ ಆಚರಿಸಲು ತೀರ್ಮಾನಿಸಲಾಗಿದೆ.
ಈ ಕಾರ್ಯಕ್ರಮದ ಪೂರ್ವಭಾವಿಯಾಗಿ ಏಪ್ರಿಲ್ 5, 2026ರಂದು ಭಾನುವಾರ ಮಕ್ಕಳಿಗೆ, ಮಹಿಳೆಯರಿಗೆ ಹಾಗೂ ಪುರುಷರಿಗೆ ವಿವಿಧ ಆಟೋಟ ಸ್ಪರ್ಧೆಗಳು ಆಯೋಜಿಸಲಾಯಿತು. ಈ ಸ್ಪರ್ಧೆಗಳಲ್ಲಿ ಸ್ಥಳೀಯರು ಉತ್ಸಾಹದಿಂದ ಭಾಗವಹಿಸಿ ಕ್ರೀಡಾತ್ಮಕ ಮನೋಭಾವವನ್ನು ತೋರಿಸಿದರು.
ಮುಖ್ಯ ಕಾರ್ಯಕ್ರಮದ ದಿನ ವಿವಿಧ ಸಾಂಸ್ಕೃತಿಕ ಹಾಗೂ ವೈದಿಕ ಕಾರ್ಯಕ್ರಮಗಳು ನಡೆಯಲಿದ್ದು, ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಈ ಕಾರ್ಯಕ್ರಮವು ಸಮಾಜದಲ್ಲಿ ಏಕತೆ, ಸಂಸ್ಕೃತಿ ಮತ್ತು ಡಾ. ಅಂಬೇಡ್ಕರ್ ಅವರ ಆದರ್ಶಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಹತ್ವ ಪಡೆದಿದೆ.