ಬಂಟ್ವಾಳದಲ್ಲಿ ಬೈಕ್ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಬಂಟ್ವಾಳ: ವಸತಿ ಗೃಹ ವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ.
ಬಂಟ್ವಾಳ ಸಜೀಪ ಮುನ್ನೂರು ನಿವಾಸಿ ಹಸನ್ ಬಾವ (55) ಹಾಗೂ ಬಂಟ್ವಾಳ ಬಿ ಮೂಡಾ ನಿವಾಸಿ ಮೊಹಮ್ಮದ್ ಇರ್ಷಾದ್ (37) ಎಂಬವರನ್ನು ಬಂಧಿಸಲಾಗಿದೆ.

2026 ರ ಮಾ.21 ರಂದು ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪರ್ಲಿಯಾ ಎಂಬಲ್ಲಿ ವಸತಿಗೃಹದ ಶೆಡ್ ನಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಅ.ಕ್ರ :37/2026, ಕಲಂ:303(2) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಬಂಟ್ವಾಳ ನಗರ ಠಾಣಾ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳು ಕಳ್ಳತನ ಮಾಡಿದ್ದ ಅಂದಾಜು ರೂ 50,000/- ಮೌಲ್ಯದ ಸ್ಕೂಟರ್ ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!