ಮಂಗಳೂರು: ಮಂಗಳೂರಿನ ಮೀನುಗಾರಿಕಾ ಬಂದರ್ ಬಳಿ ನದಿಯಲ್ಲಿ ಶವ ಪತ್ತೆಯಾಗಿದ್ದು, ಕೊಲೆ ಮಾಡಿ ನದಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ.ನಾಸೀರ್ ಯಾನೆ ದಕ್ಕೆ ನಾಸಿರ್ ಕೊಲೆಯಾದ ವ್ಯಕ್ತಿ. ಈತ ಹಲವಾರು ಕಳ್ಳತನ ಹಾಗು ದರೋಡೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ.
ಮೃತನ ಹಣೆ ಹಾಗೂ ದೇಹದ ಮೇಲೆ ಗಾಯಗಳ ಗುರುತು ಪತ್ತೆಯಾಗಿದೆ. ದುಷ್ಕರ್ಮಿಗಳು ಕೊಲೆ ಮಾಡಿ ಮೃತದೇಹ ನದಿಗೆ ಎಸೆದಿರುವ ಸಾಧ್ಯತೆ ಇದೆ.ದಕ್ಕೆಯಲ್ಲಿ ನಿರ್ಮಾಣ ಹಂತದ ಕಟ್ಟಡದ ಪಕ್ಕ ನದಿಯಲ್ಲಿ ಶವ ಪತ್ತೆಯಾಗಿದ್ದು, ಪಾಂಡೇಶ್ವರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.