ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನ — ಸಂಗೀತ ಲೋಕ ಶೋಕದಲ್ಲಿ

ಭಾರತೀಯ ಚಿತ್ರರಂಗದ ದಂತಕಥೆ, ಸಾವಿರಾರು ಹಾಡುಗಳಿಗೆ ಧ್ವನಿಯಾಗಿದ್ದ ಖ್ಯಾತ ಗಾಯಕಿ ಆಶಾ ಭೋಂಸ್ಲೆ (92) ಅವರು ನಿನ್ನೆಯ ದಿನ ಮುಂಬೈನ ಬೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ .

ಕಳೆದ ಕೆಲವು ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲ ತಿಳಿಸಿದೆ .

ಸುಮಾರು ಎಂಟು ದಶಕಗಳ ಕಾಲ ಭಾರತೀಯ ಸಂಗೀತ ಲೋಕವನ್ನು ಆಳಿದ್ದ ಆಶಾ ಅವರು, ಹಿಂದಿ ಸೇರಿದಂತೆ ವಿವಿಧ ಭಾಷೆಗಳಲ್ಲಿ 12,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಮೆಲೋಡಿ, ಶಾಸ್ತ್ರೀಯ ಸಂಗೀತ ಹಾಗೂ ಪಾಪ್ ಗಾಯನದಲ್ಲೂ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದರು .

ಇವರಿಗೆ ಪದ್ಮವಿಭೂಷಣ ಮತ್ತು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸೇರಿದಂತೆ ಅನೇಕ ಪ್ರತಿಷ್ಠಿತ ಪ್ರಶಸ್ತಿಗಳು ಲಭಿಸಿದೆ . ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿಗಳು ಹಾಗೂ ಚಿತ್ರರಂಗದ ಗಣ್ಯರು ತೀವು ಸಂತಾಪ ವ್ಯಕ್ತಪಡಿಸಿದ್ದಾರೆ. ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಅವರ ಅಂತ್ಯಕ್ರಿಯೆ ನೆರವೇರಲಿದೆ. ಆಶಾ ಭೋಂಸ್ಲೆ ಅವರ ಅಗಲಿಕೆಯಿಂದಾಗಿ ಭಾರತೀಯ ಸಂಗೀತ ಕ್ಷೇತ್ರದ ಒಂದು ಅದ್ಭುತ ಧ್ವನಿ ಮೌನವಾದಂತಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!