ಮಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಹಾಗೂ ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದ ವೈಫಲ್ಯವನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಬುಧವಾರ ನಗರದ ಕದ್ರಿ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರು ಖಾಲಿ ಗ್ಯಾಸ್ ಸಿಲಿಂಡರ್‌ಗೆ ಹೂಮಾಲೆ ಹಾಕಿ ಅದನ್ನು ಚಟ್ಟದ ಮೇಲೆ ಕಟ್ಟಿ ಹೊತ್ತುಕೊಂಡು ಅಣಕು ಶವಯಾತ್ರೆ ನಡೆಸಿ ಸಾರ್ವಜನಿಕರ ಗಮನ ಸೆಳೆದರು. ಅಲ್ಲದೆ ಗ್ಯಾಸ್ ಸ್ಟೌ ಹಾಗೂ ಖಾಲಿ ಪಾತ್ರೆಗಳನ್ನು ಪ್ರದರ್ಶಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಅಭಿನಂದನ್ ಹರೀಶ್ ಸೇರಿದಂತೆ ಬಶೀರ್, ಸುಹಾನ್ ಆಳ್ವ, ಸುನೀತ್ ದೇಸಾಯಿ, ಫಾರೂಕ್ ಪೆರ್ನೆ, ಆಸೀಫ್ ಬಜಾಲ್, ಸಮರ್ಥ್ ಭಟ್, ಪೃಥ್ವಿರಾಜ್, ಮೆಲ್ವಿನ್, ಚೇತನ್, ಮಹೇಶ್, ಪ್ರಜ್ವಲ್ ಮತ್ತಿತರರು ಉಪಸ್ಥಿತರಿದ್ದರು.