ಕುಕ್ಕಾಜೆಯಲ್ಲಿ ಭೀಕರ ಅಪಘಾತ: ಬೈಕ್ ಸಹಸವಾರ ಸ್ಥಳದಲ್ಲೇ ಸಾವು

ಬಂಟ್ವಾಳ ತಾಲ್ಲೂಕಿನ ಕುಕ್ಕಾಜೆ ಪ್ರದೇಶದಲ್ಲಿ ಗೂಡ್ಸ್ ರಿಕ್ಷಾ ಮತ್ತು ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರನು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವಕನು ಕುಕ್ಕಾಜೆಯ ಪಂಜಾಜೆ ನಿವಾಸಿ ಮನೀಶ್ (23) ಎಂದು ಗುರುತಿಸಲಾಗಿದೆ. ಅವರು ಸ್ನೇಹಿತ ಉದಯ ಅವರೊಂದಿಗೆ ಮೆಲ್ಕಾರ್ ಕಡೆಯಿಂದ ಕುಕ್ಕಾಜೆಯ ತಮ್ಮ ಮನೆಯತ್ತ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ವೇಳೆ ಮನೀಶ್ ರಸ್ತೆ ಮೇಲೆ ಎಸೆಯಲ್ಪಟ್ಟು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಪ್ರಾಣ ಕಳೆದುಕೊಂಡರು.

ಬೈಕ್ ಸವಾರ ಉದಯ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಟ್ರಾಫಿಕ್ ಎಸ್.ಐ. ಆದರ್ಶ್ ಅವರು ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!