“ಸರಕಾರಿ ಆರೋಗ್ಯ ವ್ಯವಸ್ಥೆಯನ್ನು ಖಾಸಗೀಕರಣಕ್ಕೆ ಒಪ್ಪಿಸುವ ಸರ್ಕಾರದ ನಿರ್ಧಾರ — ಜನರ ಹಕ್ಕುಗಳ ಮೇಲಿನ ದಾಳಿ”- ರಾಮಣ್ಣ ವಿಟ್ಲ

ಮಂಗಳೂರು : ಸರಕಾರಿ ಆಸ್ಪತ್ರೆಗಳ ನ್ನು ಖಾಸಗಿ ಆಸ್ಪತ್ರೆಗಳ ಜೊತೆ ಒಪ್ಪಂದ ಮಾಡಿಕೊಂಡಿರುವ ರಾಜ್ಯ ಸರಕಾರದ ಕ್ರಮ ಖಂಡಿಸಿ ಇಂದು ಮಂಗಳೂರಿನ ಕ್ಲಾಕ್ ಟವರ್ ಬಳಿ ಭಾರತ ಕಮ್ಯೂನಿಸ್ಟ್‌ ಪಕ್ಷ( ಮಾರ್ಕ್ಸ್ ವಾದಿ ಲೆನಿನ್ ವಾದಿ) ಲಿಬರೇಶನ್ ವತಿಯಿಂದ ಇಂದು ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನುದ್ದೇಶಿಸಿ ಸಿ.ಪಿ.ಐ.ಎಂ.ಎಲ್ ಲಿಬರೇಶನ್ ಜಿಲ್ಲಾ ಕಾರ್ಯದರ್ಶಿ ರಾಮಣ್ಣ ವಿಟ್ಲ ಮಾತನಾಡಿಸರಕಾರಿ ಆರೋಗ್ಯ ವ್ಯವಸ್ಥೆಯನ್ನು ಖಾಸಗೀಕರಣಕ್ಕೆ ಒಪ್ಪಿಸುವ ಸರ್ಕಾರದ ನಿರ್ಧಾರ ಜನರ ಹಕ್ಕುಗಳ ಮೇಲೆ ದಾಳಿ ಯಾಗಿದೆ ಎಂದು ಆರೋಪಿಸಿದರು. ಜನಸಾಮಾನ್ಯರ ಆರೋಗ್ಯವನ್ನು ರಕ್ಷಿಸಬೇಕಾದ ಸರ್ಕಾರವೇ ಇಂದು ಖಾಸಗಿ ಆಸ್ಪತ್ರೆಗಳ ಲಾಭದಾಸೆಗೆ ತಲೆಬಾಗುತ್ತಿದ್ದು, ಸರಕಾರಿ ಆಸ್ಪತ್ರೆಗಳನ್ನೇ ಹಂತ ಹಂತವಾಗಿ ಖಾಸಗೀಕರಣದ ಹಾದಿಗೆ ಒಯ್ಯುತ್ತಿದೆ. ಇದು ಬಡಜನರ ಬದುಕಿನ ಮೇಲೆ ನಡೆಸುತ್ತಿರುವ ದಾಳಿ ಯಾಗಿದ್ದು ಈ ಒಪ್ಪಂದ ಹಿಂಪಡೆಯುವವರೆಗೂ ನಿರಂತರ ಹೋರಾಟ ನಡೆಸಬೇಕು ಎಂದು ಕರೆ ನೀಡಿದರು.ಚಿಕಿತ್ಸೆ ಎಂಬ ಹೆಸರಿನಲ್ಲಿ ಸಾವಿರಾರು ರೂಪಾಯಿಗಳನ್ನು ಕಿತ್ತುಕೊಳ್ಳುವ ವ್ಯವಸ್ಥೆಗೆ ಈಗ ಸರ್ಕಾರವೇ ಕಾನೂನುಬದ್ಧ ಬಲ ನೀಡುತ್ತಿದೆ.
ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸುವುದು ಸರ್ಕಾರದ ಮೊದಲ ಕರ್ತವ್ಯ. ಆದರೆ ಅದನ್ನು ಬಿಟ್ಟು ಖಾಸಗೀಕರಣದ ದಾರಿಗೆ ಹೋಗುವುದು ಎಂದರೆ, ಬಡವರನ್ನು ಆರೋಗ್ಯ ಸೇವೆಯಿಂದ ದೂರ ತಳ್ಳುವುದು ಅನ್ಯಾಯವಾಗಿದ್ದು , ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಬಹುಕಾಲದಿಂದ ಸರಕಾರಿ ಮೆಡಿಕಲ್ ಕಾಲೇಜಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಆದರೆ ಸರ್ಕಾರ ಅದನ್ನು ಕಡೆಗಣಿಸಿ ಇರುವ ವ್ಯವಸ್ಥೆಯನ್ನೇ ಕುಸಿತಗೊಳಿಸುತ್ತಿದೆ. ಇದು ಜನತೆಗೆ ಮಾಡಿರುವ ದ್ರೋಹವಾಗಿದೆ ಎಂದು ಆರೋಪಿಸಿದರು.

ಸಿ.ಪಿ.ಐ.ಎಂ.ಎಲ್.ಲಿಬರೇಶನ್ ರಾಜ್ಯ ಸಮಿತಿ ಸದಸ್ಯರಾದ ಮೋಹನ್ ಕೊಡಗು ಮಾತನಾಡಿ ಸರಕಾರಿ ಆಸ್ಪತ್ರೆಗಳು ಜನರ ಹಕ್ಕು ಅದು ಸಂವಿಧಾನಿಕ ಹಕ್ಕು. ಆದರೆ, ಆ ಹಕ್ಕನ್ನು ಕಿತ್ತುಕೊಳ್ಳುವ ಕೆಲಸವನ್ನು ರಾಜ್ಯ ಸರ್ಕಾರ ವ್ಯವಸ್ಥಿತವಾಗಿ ಮಾಡುತ್ತಿದೆ ಎಂದು ಆರೋಪಿಸಿದರು.

ಆಲ್ ಇ‌ಂಡಿಯಾ ಲಾಯರ್ಸ್ ಅಸೋಸಿಯೇಷನ್ ಪಾರ್ ಜಸ್ಟೀಸ್ ( AILAJ) ಮುಖಂಡರಾದ ಅಡ್ವಕೇಟ್ ಮಹಮ್ಮದ್ ಲುಕ್ಮಾನ್ ಮಾತನಾಡಿ “ಸೌಲಭ್ಯಗಳ ಕೊರತೆ” ಎಂಬ ನೆಪದಲ್ಲಿ ಖಾಸಗಿ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳುವುದು ಎಂದರೆ ಸರ್ಕಾರ ತನ್ನ ಹೊಣೆಗಾರಿಕೆಯಿಂದ ನುಣುಚಿಕೊಳ್ಳುತ್ತಿರುವುದಕ್ಕೆ ಸ್ಪಷ್ಟ ಸಾಕ್ಷಿ ಯಾಗಿದೆ ಹಾಗೂ ಇದು ಸರಕಾರದ ಜನಪರ ನೀತಿಯಲ್ಲ ಬದಲಾಗಿ ಬಂಡವಾಳ ಶಾಹಿ ಗಳ ಪರ ನೀತಿಯಾಗಿದೆ ಎಂದು ಆರೋಪಿಸಿದರು.
ಸಿ.ಪಿ.ಐ.ಎಂ.ಎಲ್.ಲಿಬರೇಶನ್ ಜಿಲ್ಲಾ ಸಮಿತಿ ಸದಸ್ಯರಾದ ಅಡ್ವಕೇಟ್ ತುಳಸೀದಾಸ್.ಆರ್ ಮಾತನಾಡಿ ಸರಕಾರಿ ಆಸ್ಪತ್ರೆಗಳಿಗೆ ಸೂಕ್ತ ಸೌಲಭ್ಯಗಳನ್ನು ನೀಡಬೇಕಾದ ಸರಕಾರ ಖಾಸಗಿಯವರ ಲಾಬಿಗೆ ಮಣಿದಿದ್ದು ಇದನ್ನು ವಿರೋಧಿಸಬೇಕಾದ ವಿರೋಧ ಪಕ್ಷಗಳು‌ ಕೂಡಾ ಕಣ್ಣು ಮುಚ್ಚಿ ಕುಳಿತಿದೆ ಎಂದು ಆರೋಪಿಸಿದರು. ಕಾರ್ಮಿಕ ಮುಖಂಡರಾದ ಮಹಮ್ಮದ್ ‌ಅನ್ಸಾರ್ ಬಜಾಲ್ ಮಾತನಾಡಿ ಬೆಳ್ತಂಗಡಿ, ಮೂಡಬಿದ್ರೆ, ಬಂಟ್ವಾಳ, ವಿಟ್ಲ ಪ್ರದೇಶಗಳಲ್ಲಿನ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಸಂಸ್ಥೆ ಗಳಿಗೆ ವಹಿಸಿರುವುದರಿಂದ ಲಾಭವಾಗುವುದು ಜನರಿಗೆ ಅಲ್ಲ, ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ಮಾತ್ರ,
ಇಂದು ಖಾಸಗಿ ಆಸ್ಪತ್ರೆಗಳು ಹೇಗೆ ಜನರನ್ನು ಸುಲಿಗೆ ಮಾಡುತ್ತಿವೆ ಎಂಬುದಕ್ಕೆ ನಿದರ್ಶನ ವಾಗಿದೆ ಎಂದರು.


ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘದ ಮುಖಂಡರಾದ ‌ಸುಧಾ ರಾವ್ ಬೆಳ್ತಂಗಡಿ, ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು.
ಸಿ.ಪಿ.ಐ.ಎಂ.ಎಲ್ ಲಿಬರೇಶನ್ ರಾಜ್ಯ ಸಮಿತಿ ಸದಸ್ಯ ರಾದ ಮೋಹನ್ ಕೆ.ಇ ಪ್ರಾಸ್ತವಿಕ ವಾಗಿ ಮಾತನಾಡಿ ಸ್ವಾಗತಿಸಿ ಈ ಹೋರಾಟ ವನ್ನು ಜಿಲ್ಲಾದ್ಯಂತ ನಡೆಸಬೇಕಾಗಿ ಕರೆ ನೀಡಿದರು. ಪ್ರತಿಭಟನೆ ಯಲ್ಲಿ ಮುಖಂಡರುಗಳಾದ ಸಂಜೀವ ಬೆಳ್ತಂಗಡಿ, ವಿದ್ಯಾರ್ಥಿ ಮುಖಂಡರಾದ ಪ್ರಜ್ವಲ್ , ರವಿ ಕೊಡಗು, ವಿಲ್ಲಿ ವಿಲ್ಸನ್, ಸರಸ್ವತಿ ಕಡೇಶಿವಾಲಯ, ಜಿಲಾನಿ ಮಂಗಳೂರು, ದೀಕ್ಷಾ ಬಜಾಲ್,ಸುಹೈಲ್, ಶೇಖರ ಪುತ್ತೂರು, ಸುಧಾ‌.ಜಿ.ರಾವ್ ಬೆಳ್ತಂಗಡಿ, ಕುಸುಮಾವತಿ ಬೆಳ್ತಂಗಡಿ
ಅಚ್ಯುತ ಕಟ್ಟೆ, ಬದ್ರುದ್ದೀನ್, ಅಝೀಂ, ಇಬ್ರಾಹಿಂ, ಹರೀಶ್ ಮುಂತಾದವರು ಪ್ರತಿಭಟನೆಯ ನೇತ್ರತ್ವ ವಹಿಸಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!