ಉಡುಪಿ: ಬಿಜೆಪಿ ಮುಖಂಡ ಹಾಗೂ ಉದ್ಯಮಿ ಇನ್ನಾ ಉದಯ ಶೆಟ್ಟಿ (50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಇಂದು ತಮ್ಮ ಸ್ವಗೃಹದಲ್ಲಿ ನಿಧನರಾದರು.
ಅವರು ಪತ್ನಿ, ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿರುವ ರೇಷ್ಮಾ ಉದಯ ಶೆಟ್ಟಿ, ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಇನ್ನಾ ಉದಯ ಶೆಟ್ಟಿ ಅವರು ಲಯನ್ಸ್ ಕ್ಲಬ್ ಬೆಲ್ಮಣ್ನ ಮಾಜಿ ಅಧ್ಯಕ್ಷರಾಗಿದ್ದು, ಪಡುಬಿದ್ರೆಯಲ್ಲಿ ಟಯರ್ ರಿಸೋಲ್ ಅಂಗಡಿಯನ್ನು ನಡೆಸುತ್ತಿದ್ದರು.
ಅವರ ನಿಧನಕ್ಕೆ ರಾಜಕೀಯ ಹಾಗೂ ಸಾಮಾಜಿಕ ವಲಯದಲ್ಲಿ ಸಂತಾಪ ವ್ಯಕ್ತವಾಗಿದೆ.