5 ಬಾರಿ ವಾರಂಟ್ ಜಾರಿಯಾದ ಆರೋಪಿ ಬಂಧನ: ವಿದೇಶದಿಂದ ಬಂದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಮಂಗಳೂರು: ಐದು ಬಾರಿ ವಾರಂಟ್ ಜಾರಿಯಾಗಿದ್ದ ಪ್ರಕರಣದ ಆರೋಪಿ ವಿದೇಶದಿಂದ ಹಿಂತಿರುಗುವ ವೇಳೆ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಬಂಟ್ವಾಳ ತಾಲೂಕಿನ ಪೆರುವಾಯಿ ನಿವಾಸಿ ಅಬ್ಬಾಸ್ ಜಿ ಬಂಧಿತನಾಗಿದ್ದು, ವಿಟ್ಲ ಪೊಲೀಸ್ ಠಾಣೆ ಯಲ್ಲಿ ದಾಖಲಾಗಿದ್ದ 2015ರ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದನು.

ಅವನ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಕಲಂಗಳಡಿ (143, 147, 148, 504, 506, 323, 324, 326 r/w 149 IPC) ಪ್ರಕರಣ ದಾಖಲಾಗಿತ್ತು.

ಇತ್ತೀಚೆಗೆ ವಿದೇಶದಿಂದ ಮರಳಿದ ವೇಳೆ ಇಮಿಗ್ರೇಶನ್ ವಿಭಾಗದ ಸಹಕಾರದಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದರು.

ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!