ನಾರಿ ಶಕ್ತಿ ಮಹಿಳಾ ಮೀಸಲಾತಿ ಮಸೂದೆಗೆ ಬೆಂಬಲ ಸೂಚಿಸಿ ಹಾಗೂ ಮಹಿಳೆಯರಿಗೆ ಮತ್ತೆ ಮೀಸಲಾತಿ ಕಲ್ಪಿಸಬೇಕು ಎಂಬ ಆಗ್ರಹದೊಂದಿಗೆ ಮಂಗಳೂರಿನ ಪುರಭವನದ ಎದುರುಗಡೆಯ ಮಿನಿ ವಿಧಾನಸೌಧದ ಮುಂಭಾಗದಲ್ಲಿ ನಾರಿ ಹಕ್ಕು ಹೋರಾಟ ಸಮಿತಿಯ ವತಿಯಿಂದ ಪ್ರತಿಭಟನೆ ನಡೆಯಿತು.
ಕಾಂಗ್ರೆಸ್ ಸರ್ಕಾರ ಮಹಿಳಾ ಮೀಸಲಾತಿ ಮಸೂದೆಯನ್ನು ಸೋಲಿಸಿದ ಹಿನ್ನೆಲೆಯಲ್ಲಿ, ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಸಮಾನ ಅವಕಾಶ ದೊರಕಬೇಕು ಹಾಗೂ ಮೀಸಲಾತಿ ಮರುಜಾರಿಗೆ ಬರಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಕಾರ್ಯಕ್ರಮದಲ್ಲಿ ಸಹನಾ ಕುಂದ್ರರ್ ಮುಖ್ಯ ಭಾಷಣಕಾರರಾಗಿ ಮಾತನಾಡಿದರು. ರೇಖಾ ಸುದೇಶ್ ಹಾಗೂ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಭಾರತಿ ಪ್ರಭು ಕಾರ್ಯಕ್ರಮದ ಪ್ರಸ್ತಾವನೆಗೈದರು. ಸಿಂಧು ಎಂ ನಿರೂಪಣೆಗೈದರು
ಪ್ರತಿಭಟನೆಯಲ್ಲಿ ಹಲವು ಮಹಿಳೆಯರು ಹಾಗೂ ಸಾರ್ವಜನಿಕರು ಭಾಗವಹಿಸಿ ಮಹಿಳಾ ಹಕ್ಕುಗಳ ಪರ ಘೋಷಣೆಗಳನ್ನು ಕೂಗಿದರು.