ಮಣಿಪಾಲ: ಮಾವಿನಕಾಯಿ ಕೊಯ್ಯುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಮೃತ್ಯು

ಉಡುಪಿ: ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಹಿಂಭಾಗದಲ್ಲಿ ಮಾವಿನಕಾಯಿ ಕೊಯ್ಯುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ದುರ್ಘಟನೆ ನಡೆದಿದೆ.
ಮೃತ ದುರ್ದೈವಿ ಅಲೆವೂರು ನಿವಾಸಿ ಸದಾನಂದ ದೇವಾಡಿಗ (55) ಎಂದು ಗುರುತಿಸಲಾಗಿದೆ. ಅವರು ಗ್ರಾಮ ಸಹಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದರು.
ಶುಕ್ರವಾರ ಬೆಳಿಗ್ಗೆ ಮಾವಿನ ಕಾಯಿ ಕೊಯ್ಯುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿದ್ದು, ಇದರಿಂದ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ಅಗ್ನಿ ಶಾಮಕ ಇಲಾಖೆ ಸಿಬ್ಬಂದಿ ಆಗಮಿಸಿ ಮೃತ ದೇಹ ತೆರವು ಗೊಳಿಸಲು ನೆರವಾದರು. ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಸಹಕರಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!