ಮಹಿಳಾ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ಇಬ್ಬಂದಿ ನೀತಿ: ಜೆಡಿಎಸ್ ಆರೋಪ

ಮಂಗಳೂರು: ಮಹಿಳಾ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಇಬ್ಬಂದಿ ನೀತಿ ಅನುಸರಿಸುತ್ತಿವೆ ಎಂದು ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳೆಯರಿಗೆ ಹಕ್ಕು ನೀಡುವ ವಿಚಾರದಲ್ಲಿಯೇ ಕಾಂಗ್ರೆಸ್ ರಾಜಕೀಯ ಮಾಡುತ್ತಿದ್ದು, ಅದರ ‘ಮಹಿಳಾ ವಿರೋಧಿ’ ಧೋರಣೆ ಬಹಿರಂಗವಾಗಿದೆ ಎಂದು ಆರೋಪಿಸಿದರು. ದಶಕಗಳ ಹಿಂದೆಯೇ ಮಹಿಳಾ ಮೀಸಲಾತಿ ಮಸೂದೆ ಮಂಡಿಸಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ದೂರದೃಷ್ಟಿಗೆ ಕಾಂಗ್ರೆಸ್ ಬೆಂಬಲ ನೀಡಿರಲಿಲ್ಲ ಎಂದರು.


ಕರ್ನಾಟಕದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯ ಮೂಲಕ ಮಹಿಳೆಯರಿಗೆ ಮೊದಲ ಬಾರಿಗೆ ಅಧಿಕಾರ ನೀಡಿದವರು ದೇವೇಗೌಡರು. ಆದರೆ ಇದೀಗ ಮಸೂದೆ ಜಾರಿಗೆ ಬರುವ ಹಂತದಲ್ಲಿ ಕಾಂಗ್ರೆಸ್ ಕ್ಷುಲ್ಲಕ ಕಾರಣಗಳನ್ನು ಮುಂದಿಟ್ಟುಕೊಂಡು ಕಾಲಹರಣ ಮಾಡುತ್ತಿದೆ ಎಂದು ಕಿಡಿಕಾರಿದರು.
ಪ್ರಸ್ತುತ ಲೋಕಸಭೆಯಲ್ಲಿ ಮಹಿಳೆಯರ ಪ್ರಾತಿನಿಧ್ಯ ಕೇವಲ ಶೇ.14ರಷ್ಟಿದ್ದು, ಅದನ್ನು ಶೇ.33ಕ್ಕೆ ಏರಿಸಲು ಎನ್‌ಡಿಎ ಸರ್ಕಾರ ಕೈಗೊಂಡಿರುವ ಪ್ರಯತ್ನಕ್ಕೆ ವಿರೋಧ ವ್ಯಕ್ತಪಡಿಸುವುದು ಮಹಿಳಾ ಸಮುದಾಯದ ವಿರುದ್ಧದ ನಿಲುವಾಗಿದೆ ಎಂದು ಹೇಳಿದರು. ಜನಸಂಖ್ಯೆ ಹೆಚ್ಚಾದಂತೆ ಪ್ರತಿನಿಧಿಗಳ ಸಂಖ್ಯೆಯೂ ಹೆಚ್ಚಾಗಬೇಕು ಎಂಬುದು ಪ್ರಜಾಪ್ರಭುತ್ವದ ಮೂಲಭೂತ ತತ್ವವಾಗಿದ್ದು, ಅದನ್ನು ವಿರೋಧಿಸುವುದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿದೆ ಎಂದು ವಿವರಿಸಿದರು.


ವಿರೋಧ ಪಕ್ಷಗಳು ಮತಬ್ಯಾಂಕ್ ರಾಜಕೀಯಕ್ಕಾಗಿ ದೇಶದ ಹಿತಾಸಕ್ತಿಯನ್ನು ಬಲಿಗೊಡುತ್ತಿವೆ. ಭವಿಷ್ಯದ ಭಾರತದ ದೃಷ್ಟಿಯಿಂದ ಹೊಸ ಸಂಸತ್ ಭವನ ನಿರ್ಮಾಣವಾಗಿದ್ದು, ಅದನ್ನು ವಿರೋಧಿಸುವ ಬದಲು ರಚನಾತ್ಮಕವಾಗಿ ಸ್ಪಂದಿಸಬೇಕಾಗಿತ್ತು ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕಾರ್ಯಾಧ್ಯಕ್ಷ ಶಶಿರಾಜ್ ಶೆಟ್ಟಿ ಕೊಳಂಬೆ ಮತ್ತುಮಂಗಳೂರು: ಮಹಿಳಾ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಇಬ್ಬಂದಿ ನೀತಿ ಅನುಸರಿಸುತ್ತಿವೆ ಎಂದು ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳೆಯರಿಗೆ ಹಕ್ಕು ನೀಡುವ ವಿಚಾರದಲ್ಲಿಯೇ ಕಾಂಗ್ರೆಸ್ ರಾಜಕೀಯ ಮಾಡುತ್ತಿದ್ದು, ಅದರ ‘ಮಹಿಳಾ ವಿರೋಧಿ’ ಧೋರಣೆ ಬಹಿರಂಗವಾಗಿದೆ ಎಂದು ಆರೋಪಿಸಿದರು. ದಶಕಗಳ ಹಿಂದೆಯೇ ಮಹಿಳಾ ಮೀಸಲಾತಿ ಮಸೂದೆ ಮಂಡಿಸಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ದೂರದೃಷ್ಟಿಗೆ ಕಾಂಗ್ರೆಸ್ ಬೆಂಬಲ ನೀಡಿರಲಿಲ್ಲ ಎಂದರು.


ಕರ್ನಾಟಕದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯ ಮೂಲಕ ಮಹಿಳೆಯರಿಗೆ ಮೊದಲ ಬಾರಿಗೆ ಅಧಿಕಾರ ನೀಡಿದವರು ದೇವೇಗೌಡರು. ಆದರೆ ಇದೀಗ ಮಸೂದೆ ಜಾರಿಗೆ ಬರುವ ಹಂತದಲ್ಲಿ ಕಾಂಗ್ರೆಸ್ ಕ್ಷುಲ್ಲಕ ಕಾರಣಗಳನ್ನು ಮುಂದಿಟ್ಟುಕೊಂಡು ಕಾಲಹರಣ ಮಾಡುತ್ತಿದೆ ಎಂದು ಕಿಡಿಕಾರಿದರು.
ಪ್ರಸ್ತುತ ಲೋಕಸಭೆಯಲ್ಲಿ ಮಹಿಳೆಯರ ಪ್ರಾತಿನಿಧ್ಯ ಕೇವಲ ಶೇ.14ರಷ್ಟಿದ್ದು, ಅದನ್ನು ಶೇ.33ಕ್ಕೆ ಏರಿಸಲು ಎನ್‌ಡಿಎ ಸರ್ಕಾರ ಕೈಗೊಂಡಿರುವ ಪ್ರಯತ್ನಕ್ಕೆ ವಿರೋಧ ವ್ಯಕ್ತಪಡಿಸುವುದು ಮಹಿಳಾ ಸಮುದಾಯದ ವಿರುದ್ಧದ ನಿಲುವಾಗಿದೆ ಎಂದು ಹೇಳಿದರು. ಜನಸಂಖ್ಯೆ ಹೆಚ್ಚಾದಂತೆ ಪ್ರತಿನಿಧಿಗಳ ಸಂಖ್ಯೆಯೂ ಹೆಚ್ಚಾಗಬೇಕು ಎಂಬುದು ಪ್ರಜಾಪ್ರಭುತ್ವದ ಮೂಲಭೂತ ತತ್ವವಾಗಿದ್ದು, ಅದನ್ನು ವಿರೋಧಿಸುವುದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿದೆ ಎಂದು ವಿವರಿಸಿದರು. ವಿರೋಧ ಪಕ್ಷಗಳು ಮತಬ್ಯಾಂಕ್ ರಾಜಕೀಯಕ್ಕಾಗಿ ದೇಶದ ಹಿತಾಸಕ್ತಿಯನ್ನು ಬಲಿಗೊಡುತ್ತಿವೆ. ಭವಿಷ್ಯದ ಭಾರತದ ದೃಷ್ಟಿಯಿಂದ ಹೊಸ ಸಂಸತ್ ಭವನ ನಿರ್ಮಾಣವಾಗಿದ್ದು, ಅದನ್ನು ವಿರೋಧಿಸುವ ಬದಲು ರಚನಾತ್ಮಕವಾಗಿ ಸ್ಪಂದಿಸಬೇಕಾಗಿತ್ತು ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ಕಾರ್ಯಾಧ್ಯಕ್ಷ ಶಶಿರಾಜ್ ಶೆಟ್ಟಿ ಕೊಳಂಬೆ ಮತ್ತು ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಜಪ್ಪು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!