ಮಹಿಳಾ ಮೀಸಲಾತಿ ಜಾರಿಯಲ್ಲಿ ಕೇಂದ್ರದ ವಿಳಂಬ: ಮಹಿಳೆಯರ ವಿರುದ್ಧದ ನಿಲುವು ಎಂದ ಮಹಿಳಾ ಕಾಂಗ್ರೇಸ್ ಅದ್ಯಕ್ಷೆ ಉಷಾ ಅಂಚನ್

ದಕ್ಷಿಣ ಕನ್ನಡ ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಹಾಗೂ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಆಶ್ರಯದಲ್ಲಿ ಮಾಜಿ ಸಚಿವರಾದ ಶ್ರೀ.ಬಿ.ರಮನಾಥ ರೈ ಮಾರ್ಗದರ್ಶನದಲ್ಲಿ ಬಿ.ಸಿ.ರೋಡ್ ಜಂಕ್ಷನ್‌ನಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಯಿತು. 2023ರ ಮಹಿಳಾ ಮೀಸಲಾತಿ ಬಿಲ್ ಜಾರಿಗೆ ತರದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮಹಿಳಾ ಕಾರ್ಯಕರ್ತರು, ಸರ್ಕಾರದ ನಿಲುವು ಮಹಿಳೆಯರ ಆಶೆಗಳಿಗೆ ದ್ರೋಹವೆಂದು ಆರೋಪಿಸಿದರು. ಜಿಲ್ಲಾ ಮಹಿಳಾ ಗ್ರಾಮೀಣ ಅಧ್ಯಕ್ಷೆ ಉಷಾ ಅಂಚನ್ ಅವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಉಷಾ ಅಂಚನ್, ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಕಿಡಿಕಾರಿದರು. ಮಹಿಳಾ ಮೀಸಲಾತಿ ಬಿಲ್ ಜಾರಿಗೆ ತರಲು ಮನಸ್ಸಿದ್ದರೆ ತಕ್ಷಣವೇ ಸಾಧ್ಯವಿತ್ತು, ಆದರೆ ಉದ್ದೇಶಪೂರ್ವಕವಾಗಿ ವಿಳಂಬ ಮಾಡಲಾಗುತ್ತಿದೆ ಎಂದು ಅವರು ದೂರಿದರು. ಕ್ಷೇತ್ರ ಪುನರ್ವಿಂಗಡಣೆಯ ಹೆಸರಿನಲ್ಲಿ ಮಹಿಳೆಯರನ್ನು ವಂಚಿಸುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.

ಅವರು ಮುಂದುವರೆದು, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಪ್ರಭಾವದ ಎದುರು ಕೇಂದ್ರ ಸರ್ಕಾರದ ನಿಲುವು ಕುಸಿದಿದೆ ಎಂದು ಹೇಳಿದರು. ಮಹಿಳಾ ಮೀಸಲಾತಿಯನ್ನು ಕೇವಲ ರಾಜಕೀಯ ನಾಟಕವನ್ನಾಗಿ ಮಾಡಲಾಗಿದೆ ಎಂದು ಆರೋಪಿಸಿದ ಅವರು, ಮಹಿಳೆಯರ ನಿಜವಾದ ಶಕ್ತೀಕರಣಕ್ಕೆ ಕೇಂದ್ರ ಸರ್ಕಾರ ಬದ್ಧವಿಲ್ಲ ಎಂದು ಟೀಕಿಸಿದರು. ಕಾಂಗ್ರೆಸ್ ಆಡಳಿತಕ್ಕೆ ಬಂದ ಕೂಡಲೇ ಮಹಿಳಾ ಮೀಸಲಾತಿ ಜಾರಿಗೆ ತರಲಾಗುತ್ತದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು. ಮಹಿಳೆಯರ ಹಕ್ಕುಗಳಿಗಾಗಿ ಕಾಂಗ್ರೆಸ್ ಸದಾ ಹೋರಾಟ ನಡೆಸುತ್ತಿದೆ ಎಂದು ತಿಳಿಸಿದ ಅವರು, ಕೇಂದ್ರ ಸರ್ಕಾರದ ಮಹಿಳಾ ವಿರೋಧಿ ನಿಲುವು ದೇಶದ ಜನತೆಗೆ ಸ್ಪಷ್ಟವಾಗಿದೆ ಎಂದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ ಮಹಿಳಾ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಹಿಳೆಯರ ಸಮಾನ ಹಕ್ಕುಗಳಿಗಾಗಿ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ ಅವರು, ಮಹಿಳಾ ಮೀಸಲಾತಿ ಬಿಲ್ ತಕ್ಷಣ ಜಾರಿಗೆ ತರಬೇಕೆಂದು ಆಗ್ರಹಿಸಿದರು. ಈ ಸಂಧರ್ಭದಲ್ಲಿ ಮಾಜಿ ಸಚಿವರಾದ ಶ್ರೀ.ಬಿ.ರಮನಾಥ ರೈ,ಕಳೆದ ಲೋಕಸಬಾ ಅಭ್ಯರ್ಥಿ ಪದ್ಮರಾಜ್ ಆರ್ ರಾಮಯ್ಯ,ವಿಧಾನಪರಿಷತ್ ಸದಸ್ಯರಾದ ಐವನ್ ಡಿ.ಸೋಜಾ,ಪ್ರವಾಸೋದ್ಯಮ ಅಭಿವೃದ್ದಿ ಮಂಡಳಿ ಅದ್ಯಕ್ಷೆ ಶಾಲೆಟ್ ಪಿಂಟೋ,ಗೇರು ನಿಗಮದ ಅದ್ಯಕ್ಷೆ ಮಮತಾ ಗಟ್ಟಿ, ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ‌ ಅದ್ಯಕ್ಷರಾದ ಲಾವಣ್ಯ ಬಳ್ಳಾಲ್,ಕೆ.ಪಿ.ಸಿ.ಸಿ ಪ್ರದಾನ ಕಾರ್ಯದರ್ಶಿ ಎಂ.ಎಸ್.ಮಹಮ್ಮದ್,ಮಹಿಳಾ ಕಾಂಗ್ರೇಸ್ ಮುಖಂಡೆ ಮಂಜುಳಾ‌ ನಾಯಕ್ ಮಾತಾಡಿದರು.


ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾದ್ಯಕ್ಷ ಶ್ರೀ ಕುಳಾಲ್ ಸುಭಾಶ್ಚಂದ್ರ ಶೆಟ್ಟಿ,ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ,ಪಾಣೆಮಂಗಳೂರು ಬ್ಲಾಕ್ ಕಾಂಗ್ರೇಸ್ ಅದ್ಯಕ್ಷ ಚಂದ್ರಶೇಖರ ಭಂಡಾರಿ,ಅಬ್ಬಾಸ್ ಅಲಿ,ಸುದೀಪ್ ಕುಮಾರ್ ಶೆಟ್ಟಿ,ಮಹಿಳಾ ಕಾಂಗ್ರೇಸ್ ಅದ್ಯಕ್ಷೆ ಐಡಾ ಸುರೇಶ್,ಜಿಲ್ಲಾ ನಗರ ಮಹಿಳಾ ಕಾಂಗ್ರೇಸ್ ಅದ್ಯಕ್ಷರಾದ ಅಪ್ಪಿ,ಬಂಟ್ಬಾಳ ತಾಲೂಕು ಗ್ಯಾರಂಟಿ ಯೋಜನೆ ಸಮಿತಿಯ ಜಯಂತಿ ಪೂಜಾರಿ,ಮಲ್ಲಿಕಾ ವಿ.ಶೆಟ್ಟಿ,ಜವಾರ್ಲಾಲ್ ಮಂಚ್ ಜಿಲ್ಲಾದ್ಯಕ್ಷರೂ ನ್ಯಾಯವಾದಿ ಶೈಲಜಾ ರಾಜೇಶ್,ಜಿಲ್ಲಾ ಮಹಿಳಾ ಕಾಂಗ್ರೇಸ್ ಪ್ರದಾನ ಕಾರ್ಯದರ್ಶಿ ಕೆ.ಎ.ಅಸ್ಮ ಹಸೈನಾರ್ ತಾಳಿತ್ತನೂಜಿ,ರಾಜ್ಯ ಮಹಿಳಾ ಪ್ರದಾನ ಕಾರ್ಯದರ್ಶಿಗಳಾದ ಗೀತಾ ಅತ್ತಾವರ,ನಮಿತಾ ಡಿ.ರಾವ್,ಜಿಲ್ಲಾ ಕಾಂಗ್ರೇಸ್ ಪ್ರದಾನ ಕಾರ್ಯದರ್ಶಿ ಸಾರಿಕ,ಬ್ಲಾಕ್ ಕಾಂಗ್ರೇಸಿನ ಅರ್ಚನಾ,ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಉಸ್ತುವಾರಿಗಳಾದ ಭಾನು ಬಾಸ್ಕರ್,ಕಡಬ ಪಟ್ಟಣ ಪಂಚಾಯತ್ ಅದ್ಯಕ್ಷರಾದ ತಮನ್ನಾ ಜಬೀನ್,ಉಪಾದ್ಯಕ್ಷರಾದ ನೀಲಾವತಿ,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಧನಲಕ್ಷ್ಮಿ,ತಾಲೂಕ್ ಪಂಚಾಯತ್ ಮಾಜಿ ಸದಸ್ಯರಾದ ಆಶಾ ಲಕ್ಷ್ಮಣ,ಪುಷ್ಪ,ಜಿಲ್ಲಾ ಕಾಂಗ್ರೇಸ್ ಪ್ರದಾನ ಕಾರ್ಯದರ್ಶಿ ಶಾಲಿನಿ ಸತೀಶ್ ನಾಯ್ಕ್,ಬೆಳ್ತಂಗಡಿ ನಗರ ಬ್ಲಾಕ್ ಮಹಿಳಾ ಕಾಂಗ್ರೇಸ್ ಅದ್ಯಕ್ಷರಾದ ವಂದನಾ,ಗ್ರಾಮೀಣ ಅದ್ಯಕ್ಷರಾದ ಶೋಭ,ಝೀನತ್ ಉಜಿರೆ,ಪೌಝಿಯ ಬೊಳ್ಳಾಯಿ,ಕೆ‌.ಪಿ‌ಸಿ.ಸಿ,ಜಿಲ್ಲಾ ಸಮಿತಿಯ,ಬ್ಲಾಕ್ ಸಮಿತಿಯ ಪಧಾದಿಕಾರಿಗಳು ಸೇರಿದಂತೆ ಮಹಿಳಾ ಮುಖಂಡರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!