ಬದ್ರಿಯಾ ಜುಮಾ ಮಸ್ಜಿದ್ ಮತ್ತು ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್ ವತಿಯಿಂದ ಹಜ್ ಯಾತ್ರಿಕರಿಗೆ ತರಬೇತಿ ಹಾಗೂ ಬೀಳ್ಕೊಡುಗೆ ಸಮಾರಂಭ

ದೇರಳಕಟ್ಟೆ: ಬದ್ರಿಯಾ ಜುಮಾ ಮಸ್ಜಿದ್ ಮತ್ತು ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್ (ರಿ.) ದೇರಳಕಟ್ಟೆ ಇವುಗಳ ಜಂಟಿ ಆಶ್ರಯದಲ್ಲಿ 2026ನೇ ಸಾಲಿನ ಹಜ್ ಯಾತ್ರಿಕರಿಗಾಗಿ ವಿಶೇಷ ತರಬೇತಿ ಶಿಬಿರ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮವು ದೇರಳಕಟ್ಟೆಯ ಬಿ.ಜೆ.ಎಂ ಆಡಿಟೋರಿಯಂನಲ್ಲಿ ನಡೆಯಿತು.


​ಕಾರ್ಯಕ್ರಮವು ಬದ್ರಿಯಾ ಜುಮಾ ಮಸ್ಜಿದ್‌ನ ಖತೀಬರಾದ ತಾಜ್ಜುದ್ದೀನ್ ರಹ್ಮಾನಿ ಅವರ ದುವಾ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಬದ್ರಿಯಾ ಜುಮಾ ಮಸ್ಜಿದ್‌ನ ಅಧ್ಯಕ್ಷರಾದ ಅಬ್ದುಲ್ ಆರ್. ಅಹಮದ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
​ ಹಜ್ ಯಾತ್ರೆಯ ಪವಿತ್ರ ವಿಧಿವಿಧಾನಗಳ ಬಗ್ಗೆ ತರಬೇತುದಾರರಾದ ಸಿರಾಜುದ್ದೀನ್ ಫೈಝಿ ಬಪ್ಪಲಿಗೆ ಅವರು ಯಾತ್ರಿಕರಿಗೆ ಸಮಗ್ರ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದರು.

ಸೋಸಿಯೇಷನ್ (ರಿ.) ದೇರಳಕಟ್ಟೆಯ ಅಧ್ಯಕ್ಷ ಅಬ್ದುಲ್ ಲತೀಫ್ ಯಾಸೀನ್, ಬದ್ರಿಯಾ ಜುಮಾ ಮಸ್ಜಿದ್‌ನ ಗೌರವ ಅಧ್ಯಕ್ಷ ಅಬ್ದುಲ್ ಖಾದರ್ ಹಾಜಿ, ಬದ್ರಿಯಾ ಜುಮಾ ಮಸ್ಜಿದ್ ಉಪಾಧ್ಯಕ್ಷರಾದ ಅಬುಸ್ವಾಲಿ ,ದೇರಳಕಟ್ಟೆ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷರಾದ ಸಿದ್ದೀಕ್ ಡಿ ಎಂ , ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್ ಪ್ರದಾನ ಕಾರ್ಯದರ್ಶಿ ಅಬ್ದುಲ್ ಮುತಾಲಿಬ್ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಬದ್ರಿಯಾ ಜುಮಾ ಮಸ್ಜಿದ್ ಹಾಗೂ ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್‌ನ ಸರ್ವ ಆಡಳಿತ ಮಂಡಳಿ ಸದಸ್ಯರು ಮತ್ತು ಜಮಾತಿನ 23 ಹಜ್ ಯಾತ್ರಿಕರು ಭಾಗವಹಿಸಿದ್ದರು. ಯಾತ್ರಿಕರಿಗೆ ಈ ಸಂದರ್ಭದಲ್ಲಿ ಶುಭ ಹಾರೈಸಿ ಬೀಳ್ಕೊಡಲಾಯಿತು. ಬದ್ರಿಯಾ ಜುಮಾ ಮಸ್ಜಿದ್‌ನ ಪ್ರಧಾನ ಕಾರ್ಯದರ್ಶಿ ರಶೀದ್ ಡಿ. ಎಮ್. ಸ್ವಾಗತಿಸಿದರು. ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್‌ನ ಜೊತೆ ಕಾರ್ಯದರ್ಶಿ ಶಿಹಾಬುದ್ದೀನ್ ದೇರಳಕಟ್ಟೆ ವಂದಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!