ಉಡುಪಿ ವಾಣಿಜ್ಯ ಕಟ್ಟಡ ಅಗ್ನಿ ದುರಂತ ಸ್ಥಳಕ್ಕೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

Udupi: ಉಡುಪಿ ಸಿಟಿ ಬಸ್ ನಿಲ್ದಾಣದ ಸಮೀಪದ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದ ಸ್ಥಳಕ್ಕೆ ಶಾಸಕ Yashpal Suvarna ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಘಟನಾ ಸ್ಥಳದಲ್ಲಿ ಹಾನಿಯ ಪ್ರಮಾಣ ಹಾಗೂ ಪರಿಸ್ಥಿತಿಯನ್ನು ಅವಲೋಕಿಸಿದ ಬಳಿಕ ಮಾತನಾಡಿದ ಅವರು, ನಷ್ಟದ ಅಂದಾಜು ಪರಿಶೀಲಿಸಿದ ನಂತರ ಪರಿಹಾರಕ್ಕಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದರು.

ಉಡುಪಿಗೆ ಹೊಸ ತಂತ್ರಜ್ಞಾನದ ಅಗ್ನಿಶಾಮಕ ವಾಹನ ಒದಗಿಸುವಂತೆ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದೂ ಹೇಳಿದರು.

ಜಿಲ್ಲೆಯಲ್ಲಿ ಅಗ್ನಿಶಾಮಕ ಸೇವೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಹೆಚ್ಚುವರಿ ಅಗ್ನಿಶಾಮಕ ಠಾಣೆಗಳನ್ನು ಸ್ಥಾಪಿಸುವಂತೆ ಸರ್ಕಾರವನ್ನು ಆಗ್ರಹಿಸಲಾಗುವುದು ಎಂದು ತಿಳಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!