“ಬಿಜೆಪಿ ಸರ್ಕಾರದ ಆಡಳಿತ ಸಂಪೂರ್ಣ ವೈಫಲ್ಯ: ಬೆಲೆಯೇರಿಕೆ ಸಹಿತ ಜನರ ಸಂಕಷ್ಟಕ್ಕೆ ಕೇಂದ್ರವೇ ನೇರ ಕಾರಣ”; ಸುಳ್ಯದಲ್ಲಿ ಎಂ.ಎಸ್. ಮಹಮ್ಮದ್ ಆಕ್ರೋಶ

ಸುಳ್ಯ: ಯುವ ಕಾಂಗ್ರೆಸ್ ಸಮಿತಿ ಸುಳ್ಯ, ಬ್ಲಾಕ್ ಕಾಂಗ್ರೆಸ್ ಸಮಿತಿ ಸುಳ್ಯ, ಇಂಟಕ್ ಸ್ನೇಹ ಸಂಗಮ ರಿಕ್ಷಾ ಯೂನಿಯನ್ ಹಾಗೂ ಕಾಂಗ್ರೆಸ್ ಮುಂಚೂಣಿ ಘಟಕಗಳ ಸಹಕಾರದೊಂದಿಗೆ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಸುಳ್ಯದ ಖಾಸಗಿ ಬಸ್ ನಿಲ್ದಾಣದ ಬಳಿ ಭರ್ಜರಿ ಮೆರವಣಿಗೆ ಮತ್ತು ಪ್ರತಿಭಟನಾ ಸಭೆ ನಡೆಯಿತು. LPG ಹಾಗೂ CNG ಗ್ಯಾಸ್ ಸಮಸ್ಯೆ, ಬೆಲೆಯೇರಿಕೆ ಮತ್ತು ಜನಜೀವನದ ಸಂಕಷ್ಟಗಳನ್ನು ಖಂಡಿಸಿ ನೂರಾರು ಕಾರ್ಯಕರ್ತರು ಭಾಗವಹಿಸಿದರು.

ಸಭೆಯಲ್ಲಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಸುಳ್ಯ-ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಉಸ್ತುವಾರಿ ಎಂ.ಎಸ್. ಮಹಮ್ಮದ್, ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲೂ ವಿಫಲವಾಗಿದೆ.ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಎಲ್ಲಾ ಕ್ಷೇತ್ರದಲ್ಲೂ ಸಂಪೂರ್ಣವಾಗಿ ವಿಫಲಗೊಂಡ ಸರಕಾರವಾಗಿದೆ.ಮತ್ತು ಈ ದೇಶ ಕಂಡ ಅತ್ಯಂತ ದುರ್ಭಲ ಪ್ರದಾನಮಂತ್ರಿ ಅದು ನರೇಂದ್ರ ಮೋದಿ ಎಂದು ಪ್ರತಿಪಾದಿಸಿದರು

ರಷ್ಯದಿಂದ ತೈಲ ಆಮದು ಮಾಡಿಕೊಳ್ಳಲು ಅಮೇರಿಕಾ ಅದ್ಯಕ್ಷರ ಅನುಮತಿ ಪಡೆದುಕೊಳ್ಳಬೇಕಾದ ದುಸ್ತಿತಿ ಭಾರತಕ್ಕೆ ಬಂದಿದೆ.ಇದಕ್ಕೆ ಕಾರಣ ನರಹೇಡಿ ಪ್ರದಾನಿ ಎಂದು ಪುನರುಚ್ಚಿಸಿದರು.
ದೇಶದ ಆರ್ಥಿಕ ಮತ್ತು ವಿದೇಶಾಂಗ ನೀತಿಗಳು ಸರಿಯಾದ ದಾರಿಯಲ್ಲಿ ಸಾಗುತ್ತಿಲ್ಲ ಎಂದು ಟೀಕಿಸಿದರು. ಆಡಳಿತದಲ್ಲಿ ಮುಂದುವರಿಯಲು ನರೇಂದ್ರ ಮೋದಿಯವರಿಗೆ ಯಾವುದೇ ನೈತಿಕತೆಯಿಲ್ಲ ಎಂದು ಅವರು ಹೇಳಿದರು.

ಗ್ಯಾಸ್ ಸಿಲಿಂಡರ್ ಕೊರತೆ ಮತ್ತು ಬೆಲೆ ಏರಿಕೆಯಿಂದ ರಿಕ್ಷಾ ಚಾಲಕರು, ಬಡವರು ಹಾಗೂ ಹೋಟೆಲ್ ಉದ್ಯಮಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಮಾನ್ಯ ಜನರ ಜೀವನ ದುಸ್ತರವಾಗಿದ್ದು, ಈ ಅನ್ಯಾಯದ ವಿರುದ್ಧ ಜನರ ಶಾಪ ಸರ್ಕಾರಕ್ಕೆ ತಟ್ಟಲಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಮಹಿಳಾ ಮೀಸಲಾತಿ ವಿಚಾರವನ್ನು ಪ್ರಸ್ತಾಪಿಸಿದ ಅವರು, ದೇಶದಲ್ಲಿ ಮಹಿಳೆಯರ ರಾಜಕೀಯ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಲು ಕಾಂಗ್ರೆಸ್ ಪಕ್ಷವೇ ಮೊದಲಿನಿಂದಲೂ ಬದ್ಧವಾಗಿದೆ ಎಂದು ಹೇಳಿದರು. 33% ಮಹಿಳಾ ಮೀಸಲಾತಿ ಎಂಬುದು ಕೇವಲ ಕಾನೂನು ವಿಷಯವಲ್ಲ, ಅದು ಮಹಿಳೆಯರಿಗೆ ಸಮಾನ ಅವಕಾಶ ನೀಡುವ ಸಾಮಾಜಿಕ ನ್ಯಾಯದ ಭಾಗವಾಗಿದೆ. ಗ್ರಾಮ ಪಂಚಾಯತ್‌ನಿಂದ ಸಂಸತ್ತಿನವರೆಗೂ ಮಹಿಳೆಯರಿಗೆ ಹೆಚ್ಚಿನ ಪ್ರತಿನಿಧಿತ್ವ ಸಿಗಬೇಕು ಎಂಬುದು ಕಾಂಗ್ರೆಸ್‌ನ ನಿಲುವಾಗಿದ್ದು, ಹಲವಾರು ಮಹಿಳಾ ನಾಯಕಿಯರು ಇದೇ ಮೀಸಲಾತಿಯಿಂದ ಹೊರಹೊಮ್ಮಿದ್ದಾರೆ ಎಂದು ವಿವರಿಸಿದರು. ಸುಳ್ಯ ಕ್ಷೇತ್ರದಲ್ಲಿಯೂ ಮಹಿಳಾ ಶಾಸಕಿಯಾಗಲು ಕಾಂಗ್ರೆಸ್ ನೀಡಿದ ಮೀಸಲಾತಿಯ ಫಲವಾಗಿದೆ ಎಂದು ಅವರು ಸೂಚಿಸಿದರು.

ಕೊನೆಯಲ್ಲಿ ಮಾತನಾಡಿದ ಅವರು, ಭವ್ಯ ಭಾರತ ನಿರ್ಮಾಣಕ್ಕಾಗಿ ಕಾಂಗ್ರೆಸ್ ಕಾರ್ಯಕರ್ತರು ಸಂಘಟಿತವಾಗಿ ಹೋರಾಟ ನಡೆಸಬೇಕು ಎಂದು ಕರೆ ನೀಡಿದರು. ಬೆಲೆಯೇರಿಕೆ ಮತ್ತು ಜನವಿರೋಧಿ ನೀತಿಗಳ ವಿರುದ್ಧ ಒಂದೇ ದಿನದ ಪ್ರತಿಭಟನೆ ಸಾಕಾಗುವುದಿಲ್ಲ; ನ್ಯಾಯ ದೊರೆಯುವವರೆಗೆ ಹೋರಾಟ ಮುಂದುವರಿಯಬೇಕು ಎಂದು ಅವರು ಮನವಿ ಮಾಡಿದರು.

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾದ್ಯಕ್ಷರಾದ ಶ್ರೀ.ಕುಳಾಲು ಸುಭಾಶ್ಚಂದ್ರ ಶೆಟ್ಟಿ,ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ ಪಿ ಶಶಿಧರ್, ಸುಳ್ಯ ವಿಧಾನ ಸಭಾ ಕ್ಷೇತ್ರ ಉಸ್ತುವಾರಿ, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ವೆಂಕಪ್ಪ ಗೌಡ, ಸುಳ್ಯ ವಿಧಾನ ಸಭಾ ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷ ದಿನೇಶ್ ಅಂಬೇಕಲ್ಲು, ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ಗಫೂರ್ ಕಲ್ಮಡ್ಕ, ಜಿಲ್ಲಾ ಪಂಚಾಯತ್ ರಾಜ್ ಸಂಘಟನೆ ಕಾರ್ಯದರ್ಶಿ ಭವಾನಿಶಂಕರ್ ಕಲ್ಮಡ್ಕ, ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ, ಸುಳ್ಯ ವಿಧಾನ ಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಪೈಜಲ್ ಕಡಬ, ನಂದರಾಜ್ ಸಂಕೇಶ, ಗೋಕುಲ್ ದಾಸ್,ಸುಳ್ಯ ಬ್ಲಾಕ್ ಪಂಚಾಯತ್ ರಾಜ್ ಸಂಘಟನೆ ಅಧ್ಯಕ್ಷ ಜಯಪ್ರಕಾಶ್ ನೆಕ್ರಪ್ಪಾಡಿ, ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ್ ಎಂ ಜೆ, ಪಿ ಎಸ್ ಗಂಗಾಧರ್, ಸೂಡ ಅಧ್ಯಕ್ಷ ಮುಸ್ತಫಾ ಕೆ ಎಂ, ರಕ್ಷಿತ್ ದೊಡ್ಡಡ್ಕ, ಶಿವಕುಮಾರ್ ಕಂಡಡ್ಕ, ಗ್ಯಾರಂಟಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಮಂಜುನಾಥ್ ಕಂಡಡ್ಕ, ಪರಮೇಶ್ವರ್ ಕೆಂಬಾರೆ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!