ಗ್ಯಾಸ್ ದರ ಏರಿಕೆ ಹೋಟೆಲ್ ಉದ್ಯಮಕ್ಕೆ ಆಘಾತ: ಡಾ. ತಲ್ಲೂರು ಶಿವರಾಮ ಶೆಟ್ಟಿ


ಉಡುಪಿ: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಏಕಾಏಕಿಯಾಗಿ ಇಂದು ಬರೋಬ್ಬರಿ 993ರೂ. ಹೆಚ್ಚಳವಾಗಿದೆ. ಇದರಿಂದ ಹೋಟೆಲ್ ಮತ್ತು ರೆಸ್ಟೋರೆಂಟ್ ಉದ್ಯಮಿಗಳಿಗೆ ದೊಡ್ಡ ಆರ್ಥಿಕ ಹೊರೆಯಾಗಲಿದೆ. ವಾಣಿಜ್ಯ ಸಿಲಿಂಡರ್ ಬೆಲೆ ಹೆಚ್ಚಳದಿಂದ ಹೊರಗಿನ ಆಹಾರ ಪದಾರ್ಥಗಳ ಬೆಲೆ ಏರಿಕೆಯ ಭೀತಿ ಎದುರಾಗಿದೆ. ಎಲ್ ಪಿಜಿ ದರ ಏರಿಕೆ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಹೊಟೇಲ್ ಮಾಲಕರ ಸಂಘದ ರಾಜ್ಯ ಉಪಾಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರು, ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ದರ ಏರಿಕೆಯಿಂದ
ಹೋಟೆಲ್ ಹಾಗೂ ರೆಸ್ಟೋರೆಂಟ್ ಮಾಲೀಕರು ಭಾರೀ ದೊಡ್ಡ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಕೆಲವರು ಬೆಳಿಗ್ಗೆ ಹೋಟೆಲ್ ತೆರೆದು ಮಧ್ಯಾಹ್ನದ ಬಳಿಕ ಬಂದ್ ಮಾಡುವ ಸ್ಥಿತಿಗೆ ತಲುಪಿದ್ದಾರೆ. ಇನ್ನೂ ಕೆಲವು‌ ಮಂದಿ ಕೆಲವೊಂದು ಐಟಂಗಳನ್ನು ಮಾಡಿಕೊಂಡು ದಿನ ಕಳೆಯುತ್ತಿದ್ದಾರೆ. ಇರಾನ್- ಅಮೇರಿಕಾ ಯುದ್ಧ ಅಂತ್ಯಗೊಂಡರೂ ಗ್ಯಾಸ್ ನ ಸಮಸ್ಯೆ ಮಾತ್ರ ಪರಿಹಾರಗೊಂಡಿಲ್ಲ. ಇದು ಯಾಕೆ ಆಗುತ್ತಿಲ್ಲ ಎಂಬುವುದೇ ತಿಳಿಯುತ್ತಿಲ್ಲ ಎಂದರು. ಇಂದು ಬೆಳಿಗ್ಗೆ ಒಮ್ಮೇಲೆ ಎಲ್ ಪಿಜಿ ದರ 993 ರೂ. ಹೆಚ್ಚಳ ಮಾಡಿದ್ದಾರೆ. ಇದು ಹೋಟೆಲ್ ಹಾಗೂ ರೆಸ್ಟೋರೆಂಟ್ ಮಾಲೀಕರಿಗೆ ಆಘಾತ ಉಂಟು ಮಾಡಿದೆ. ಈ ರೀತಿ ಗ್ಯಾಸ್ ದರ ಹೆಚ್ಚಳ ಮಾಡಿದರೆ ನಾವು ಹೇಗೆ ಗ್ರಾಹಕರ ಮೇಲೆ ಹೆಚ್ಚಿನ ಹೊರೆ ಹಾಕುವುದು. ಗ್ಯಾಸ್ ಲಭ್ಯತೆಯೂ ಸಮರ್ಪಕವಾಗಿಲ್ಲ. ಒಂದು ದಿನ‌ ಕೊಟ್ಟರೆ ಮತ್ತೆರಡು ದಿನ ಗ್ಯಾಸ್ ಇರುವುದಿಲ್ಲ. ಗ್ಯಾಸ್ ಕೊರತೆ ಹಾಗೂ ದರ ಏರಿಕೆಯಿಂದ ಆಹಾರ ಪದಾರ್ಥಗಳ ದರವನ್ನು ಹೆಚ್ಚಿಸುವ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ಹೇಳಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!