ಪುತ್ತೂರು: ಕೇರಳದಲ್ಲಿ ಈ ಬಾರಿ ಬಿಜೆಪಿ ಡಬಲ್ ಡಿಜಿಟ್ ಸಂಖ್ಯೆಯಲ್ಲಿ ಸ್ಥಾನ ಗಳಿಸಲಿದೆ ಎಂದು ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಮಾತನಾಡಿದ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ಕೇರಳದಲ್ಲಿ ಬಿಜೆಪಿ ಸುಮಾರು 20 ಶೇಕಡಾ ಮತಗಳನ್ನು ಪಡೆದಿದ್ದು, ತ್ರಿಶೂರ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಯಗಳಿಸಿರುವುದನ್ನು ಉಲ್ಲೇಖಿಸಿದರು.
ಕೇರಳದಿಂದ ಲೋಕಸಭೆಗೆ ಬಿಜೆಪಿ ಅಭ್ಯರ್ಥಿಯನ್ನು ಗೆಲುವಿನತ್ತ ಕೊಂಡೊಯ್ದಿದ್ದೇವೆ. ಇದೇ ರೀತಿ ಈ ಬಾರಿ ವಿಧಾನಸಭಾ ಚುನಾವಣೆಯಲ್ಲೂ ಪಕ್ಷ ಉತ್ತಮ ಸಾಧನೆ ಮಾಡಲಿದೆ ಎಂದು ಹೇಳಿದರು.
ಬಿಜೆಪಿ ಹಿಂದುತ್ವದ ತತ್ವಾಧಾರಿತ ಪಕ್ಷವಾಗಿದ್ದು, ಕರ್ನಾಟಕ, ಕರಾವಳಿ ಅಥವಾ ಕೇರಳ ಎಂಬ ಭೇದ ಇಲ್ಲ ಎಂದು ಸ್ಪಷ್ಟಪಡಿಸಿದರು.
ಬಿಜೆಪಿ ಸಂಸದ ಸುರೇಶ್ ಗೋಪಿ ಅವರು ಬೀಫ್ ಸೇವನೆ ಕುರಿತು ನೀಡಿದ ಹೇಳಿಕೆ ವೈಯಕ್ತಿಕವಾಗಿದ್ದು, ಅದು ಪಕ್ಷದ ಅಧಿಕೃತ ನಿಲುವಲ್ಲ ಎಂದು ಕೆ. ಸುರೇಂದ್ರನ್ ತಿಳಿಸಿದ್ದಾರೆ.