ಮಂಗಳೂರು, ಮೇ 2: “ಬಿಎಸ್ ವೈ ಅಭಿಮಾನೋತ್ಸವ” ಕಾರ್ಯಕ್ರಮ ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಮಾರು 5 ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಕಿಶೋರ್ ಕುಮಾರ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಜಿಲ್ಲೆಯ ವಿವಿಧ ಭಾಗಗಳಿಂದ ಕಾರ್ಯಕರ್ತರನ್ನು ಸಂಘಟಿಸಲಾಗುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಮಂಗಳೂರು ನಗರ ದಕ್ಷಿಣ ಮಂಡಲ ಅಧ್ಯಕ್ಷ ರಮೇಶ್ ಕಂಡೆಟ್ಟು, ಹಿಂದುಳಿದ ವರ್ಗಗಳ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಮಹೇಶ್ ಜೋಗಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಸಂಜಯ ಪ್ರಭು ಹಾಗೂ ವಸಂತ ಪೂಜಾರಿ ಉಪಸ್ಥಿತರಿದ್ದರು.