ಉಡುಪಿಯಲ್ಲಿ ಮೇ 3ರಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ: ಕರ್ನಾಟಕ ಯಕ್ಷಗಾನ ಅಕಾಡೆಮಿಯು 2025ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ, ಗೌರವ ಪ್ರಶಸ್ತಿ, ಯಕ್ಷಸಿರಿ ಪ್ರಶಸ್ತಿ, ದೀ. ಕರ್ಕಿ ಹಿರಿಯ ಪರಮಯ್ಯ ಹಾಸ್ಯಗಾರ ಇವರ ಹೆಸರಿನಲ್ಲಿ ದತ್ತಿನಿಧಿ ಪ್ರಶಸ್ತಿ ಹಾಗೂ 2024ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮೇ.3ರಂದು ಮಧ್ಯಾಹ್ನ 1 ಗಂಟೆಗೆ ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದಲ್ಲಿ ಹಮ್ಮಿಕೊಂಡಿದೆ ಎಂದು ಅಕಾಡೆಮಿ ಅಧ್ಯಕ್ಷರಾದ ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು.


ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಿಧಾನ ಸಭಾಧ್ಯಕ್ಷ ಯು.ಟಿ ಖಾದ‌ರ್ ಅವರು ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ಉಸ್ತುವಾರಿ ಸಚಿವೆ ಲಕ್ಷ್ಮೀ ಆ‌ರ್.ಹೆಬ್ಬಾಳ್ಳ‌ರ್ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸುವರು. ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್.ತಂಗಡಗಿ ಇವರು ಪ್ರಶಸ್ತಿ ಪ್ರದಾನ ಹಾಗೂ ಕಿರು ಪರಿಚಯ ಪುಸ್ತಕ ಬಿಡುಗಡೆ ಮಾಡುವರು. ಶಾಸಕ ಯಶ್ನಾಲ್ ಎ.ಸುವರ್ಣ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸುವರು ಎಂದರು.


ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತರು- ಡಾ. ಕೆ. ಎಂ. ರಾಘವ ನಂಬಿಯಾರ್, 5 ಜನ ಗೌರವ ಪ್ರಶಸ್ತಿ ಪುರಸ್ಕೃತರಾದ-ರೆಂಜಾಳ ರಾಮಕೃಷ್ಣರಾವ್, ವಿಷ್ಣು ಮಂಜಪ್ಪ ಆಚಾರಿ ಬಳ್ಳೂರು, ಡಿ. ಮನೋಹರ್ ಕುಮಾರ್, ಮುರಲಿ ಕಡೆಕಾರ್, ರಮೇಶ್, 10 ಜನ ಯಕ್ಷಸಿರಿ ಪ್ರಶಸ್ತಿ ಪುರಸ್ಕೃತರಾದ ಸಣ್ಣಮಲ್ಲಯ್ಯ, ಲಕ್ಷ್ಮಣ ಗೌಡ ಬೆಳಾಲ್, ದಾಸಪ್ಪ ಗೌಡ ಗೇರುಕಟ್ಟೆ, ಎ.ಜಿ. ನಾಗರಾಜು, ದಾಸನಡ್ಕ ರಾಮ ಕುಲಾಲ್, ರಾಜೀವ್ ಶೆಟ್ಟಿ ಹೊಸಂಗಡಿ, ಕೇಶವ ಶಕ್ತಿನಗರ, ಸದಾಶಿವ ಕುಲಾಲ್, ಬೆಳ್ಳಾರೆ ಮಂಜುನಾಥ ಭಟ್, ಜಿ.ಕೆ. ಶ್ರೀನಿವಾಸ ಸಾಲಿಯಾನ್, ಹಾಗೂ ದಿ। ಕರ್ಕಿ ಹಿರಿಯ ಪರಮಯ್ಯ ಹಾಸ್ಯಗಾರ ಇವರ ಹೆಸರಿನಲ್ಲಿ ನೀಡುತ್ತಿರುವ ದತ್ತಿನಿಧಿ ಪ್ರಶಸ್ತಿ ಪುರಸ್ಕೃತರಾದ ಶ್ರೀ ದೇವದಾಸ ರಾವ್ ಕೊಡ್ಲಿ ಹಾಗೂ 2024ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿ ಪುರಸ್ಕೃತರಾದ ಅಶೋಕ ಹಾಸ್ಯಗಾರ, ಕೆರೆಮನೆ ಶಿವಾನಂದ ಹೆಗಡೆ, ಮಣಿಪಾಲ್‌ ಯುನಿವರ್ಸಲ್ ಪ್ರೆಸ್ ಇವರು ಪ್ರಶಸ್ತಿ ಸ್ವೀಕರಿಸಲಿರುವರು. ಮಧ್ಯಾಹ್ನ 1 ರಿಂದ 3 ಗಂಟೆವರೆಗೆ ಶ್ರೀ ಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾ ಮಂಡಳಿ ಇವರಿಂದ ಬಬ್ರುವಾಹನ ಕಾಳಗ’ ಬಡಗುತಿಟ್ಟು ಯಕ್ಷಗಾನ ಪ್ರಸಂಗದ ಪ್ರದರ್ಶನವನ್ನು ಏರ್ಪಡಿಸಿದೆ ಎಂದರು.ಸುದ್ದಿಗೋಷ್ಟಿಯಲ್ಲಿ ರಿಜಿಸ್ಟ್ರಾರ್ ನಮ್ರತ ಎನ್. ಹಾಗೂ ಸದಸ್ಯ ಕೃಷ್ಣಪ್ಪ ಪೂಜಾರಿ ಉಪಸ್ಥಿತರಿದ್ದರು

SHARE
Loading spinner

Leave a Reply

Your email address will not be published. Required fields are marked *

error: Content is protected !!