ತಿರುವನಂತಪುರಂ, ಮೇ 4: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಇತಿಹಾಸ ನಿರ್ಮಿಸಿದ್ದು, ರಾಜ್ಯದಲ್ಲಿ ಮೊದಲ ಬಾರಿಗೆ 3 ಸ್ಥಾನಗಳನ್ನು ಗೆಲ್ಲುವ ಮೂಲಕ ಮಹತ್ವದ ಸಾಧನೆ ಮಾಡಿದೆ.
ಚತಾನ್ನೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಬಿ. ಗೋಪಕುಮಾರ್ ಸುಮಾರು 4,000 ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ.
ಇದೇ ವೇಳೆ ನೇಮಮ್ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಸುಮಾರು 3,000 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಕಳಕುಟಮ್ ಬಿಜೆಪಿ ಅಭ್ಯರ್ಥಿ ಮುರಳೀಧರನ್ 300 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ಇದರಿಂದ ಕೇರಳದ ರಾಜಕೀಯ ಇತಿಹಾಸದಲ್ಲಿ ಬಿಜೆಪಿ ಹೊಸ ಅಧ್ಯಾಯ ಬರೆಯುವಲ್ಲಿ ಯಶಸ್ವಿಯಾಗಿದೆ. ಇದುವರೆಗೆ ವಿಧಾನಸಭಾ ಚುನಾವಣೆಯಲ್ಲಿ ಖಾತೆ ತೆರೆಯಲು ವಿಫಲವಾಗಿದ್ದ ಬಿಜೆಪಿ, ಈ ಬಾರಿ ಮೂರು ಕ್ಷೇತ್ರಗಳಲ್ಲಿ ಜಯ ಸಾಧಿಸುವ ಮೂಲಕ ರಾಜ್ಯ ರಾಜಕೀಯದಲ್ಲಿ ತನ್ನ ಸ್ಥಾನವನ್ನು ಬಲಪಡಿಸಿದೆ.
ಈ ಫಲಿತಾಂಶವು ಕೇರಳದಲ್ಲಿ ಬಿಜೆಪಿ ವಿಸ್ತರಣೆಗೆ ಹೊಸ ದಾರಿ ತೆರೆದಿದ್ದು, ಮುಂದಿನ ಚುನಾವಣಾ ರಾಜಕೀಯದಲ್ಲಿ ಮಹತ್ವದ ಪ್ರಭಾವ ಬೀರುವ ಸಾಧ್ಯತೆ ಇದೆ.