ಪಾಣೆಮಂಗಳೂರಿನಲ್ಲಿ ಕಾರು ಡಿಕ್ಕಿ: ಗಾಯಾಳು ಪಾದಚಾರಿ ಚಿಕಿತ್ಸೆ ಫಲಿಸದೆ ಸಾವು

ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪಾದಾಚಾರಿಯೊರ್ವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಪಾಣೆಮಂಗಳೂರು ಎಂಬಲ್ಲಿ ರವಿವಾರ ಸಂಜೆ ವೇಳೆ ನಡೆದಿದೆ. ಪುತ್ತೂರು ನಿವಾಸಿ ವಿಶ್ವನಾಥ ರೈ ( 63) ಅವರು ಮೃತಪಟ್ಟ ವ್ಯಕ್ತಿಯಾಗಿದ್ದಾರೆ.
ವಿಶ್ವನಾಥ ಅವರು ಪಾಣೆಮಂಗಳೂರಿನ ನೆಹರು ನಗರದಲ್ಲಿರುವ ಸಾಗರ್ ಅಡಿಟೋರಿಯಂ ನಲ್ಲಿ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ಬಂದು ವಾಪಸು ಮನೆಗೆ ಹೋಗುವರಿದ್ದು, ರಸ್ತೆಯನ್ನು ದಾಟುತ್ತಿದ್ದ ವೇಳೆ ಬಿಸಿರೋಡಿನಿಂದ ಮೆಲ್ಕಾರ್ ಕಡೆಗೆ ಅತೀ ವೇಗದಿಂದ ಬಂದ ಕಾರೊಂದು ಡಿಕ್ಕಿಯಾಗಿದೆ.

ಅಪಘಾತದಲ್ಲಿ ವಿಶ್ವನಾಥ ರೈ ಅವರಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಗಂಭೀರವಾಗಿ ಗಾಯಗೊಂಡಿದ್ದ ಇವರಿಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಂಜೆ ವೇಳೆ ಮೃತಪಟ್ಟ ಬಗ್ಗೆ ಪೋಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ಆದರ್ಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!