ವಿಟ್ಲ: ಕಾರಿಗೆ ಬಸ್ಸು ಡಿಕ್ಕಿ – ಇಬ್ಬರಿಗೆ ಗಾಯ

ವಿಟ್ಲ: ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಘಟನೆ ಮೇ.೫ರಂದು ವಿಟ್ಲ ನಾಲ್ಕು ಮಾರ್ಗ ಜಂಕ್ಷನ್ ನಲ್ಲಿ ನಡೆದಿದೆ.

ವಿಟ್ಲದ ಖಾಸಗಿ ಬಸ್ ನಿಲ್ದಾಣದ ಕಡೆಗೆ ಬರುತ್ತಿದ್ದ ‘ಫಲ್ಗುಣಿ’ ಹೆಸರಿನ ಖಾಸಗಿ ಬಸ್, ನಾಲ್ಕು ರಸ್ತೆಗಳ ಜಂಕ್ಷನ್ ದಾಟಿದ ತಕ್ಷಣವೇ ತನ್ನ ಮುಂಭಾಗದಲ್ಲಿದ್ದ ಹುಂಡೈ ಕಾರಿಗೆ ವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಬಸ್ಸಿನ ಮುಂಭಾಗದಲ್ಲಿ ಸಿಲುಕಿಕೊಂಡಿದ್ದು, ಬಸ್ಸು ಕಾರನ್ನು ಸುಮಾರು 50 ಅಡಿಗಳಷ್ಟು ದೂರಕ್ಕೆ ತಳ್ಳಿಕೊಂಡು ಹೋಗಿದೆ. ಅಪಘಾತದಿಂದಾಗಿ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಕಾರಿನಲ್ಲಿದ್ದ ಓರ್ವ ಮಹಿಳೆ ಮತ್ತು ಬಾಲಕ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯರು ಕೂಡಲೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದಾಗಿ ಕೆಲಕಾಲ ರಸ್ತೆ ಸಂಚಾರ ವ್ಯತ್ಯಯ ಉಂಟಾಗಿತ್ತು.’

SHARE
Loading spinner

Leave a Reply

Your email address will not be published. Required fields are marked *

error: Content is protected !!