ಉಡುಪಿಯಲ್ಲಿ ಅಕಾಲಿಕ ಮಳೆ: ಬಿಸಿಲ ಬೇಗೆಯಿಂದ ಕಂಗೆಟ್ಟ ಜನರಿಗೆ ತಂಪಿನ ಅನುಭವ

ಉಡುಪಿ: ಉಡುಪಿ ತಾಲೂಕಿನಾದ್ಯಂತ ಇಂದು ಬೆಳಿಗ್ಗೆ ಅಕಾಲಿಕ ಮಳೆ ಸುರಿದಿದ್ದು, ಬಿಸಿಲ ಬೇಗೆಯಿಂದ ತತ್ತರಿಸಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ.
ಬೆಳಿಗ್ಗೆ 10ಗಂಟೆಗೆ ಸುಮಾರಿಗೆ ಶುರುವಾದ ಗುಡುಗು ಸಹಿತ ಮಳೆಯು ಎರಡು ತಾಸುಗಿಂತಲೂ‌ ಹೆಚ್ಚು ಕಾಲ ಧಾರಾಕಾರವಾಗಿ ಮಳೆ ಸುರಿದಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನರು ಮಳೆಯಿಂದ ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಉಡುಪಿ ನಗರ, ಸಂತೆಕಟ್ಟೆ, ಮಣಿಪಾಲ, ಅಲೆವೂರು, ಪರ್ಕಳ, ಮಲ್ಪೆ ಮೊದಲಾದ ಕಡೆಗಳಲ್ಲಿ ಜೋರಾಗಿ ಮಳೆ ಸುರಿದಿದೆ.


ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಬಳಿಕ ಎಡಬಿಡದೆ ಸುರಿದ ಮಳೆಯು ಬಿಸಿಲಿನಿಂದ ಕಂಗೆಟ್ಟಿದ್ದ ಉಡುಪಿ ಜನತೆಗೆ ತಂಪಿನ ವಾತಾವರಣ ಸೃಷ್ಟಿಯಾಗಿದೆ.
ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ 7 ದಿನಗಳ ಕಾಲ ಅಲ್ಲಲ್ಲಿ ಗುಡುಗು, ಸಿಡಿಲು ಹಾಗೂ ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮೇ 12ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೆಡೆ ಭಾರೀ ಮಳೆಯೂ ಸುರಿಯಬಹುದೆಂದು ಎಚ್ಚರಿಕೆ ನೀಡಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!