ಮನ್ರೇಗಾ ರದ್ದು ವಿರುದ್ಧ ಸುಪ್ರೀಂ ಕೋರ್ಟ್ ಮೊರೆ: ರಾಜ್ಯ ಸಚಿವ ಸಂಪುಟ ತೀರ್ಮಾನ

ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂಎನ್‌ಆರ್‌ಇಜಿಎ) ರದ್ದುಪಡಿಸಿ ಜಾರಿಗೆ ತಂದಿರುವ ‘ವಿಕಸಿತ ಭಾರತ್-ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕಾ ಮಿಷನ್ (ಗ್ರಾಮೀಣ)’ ಕಾಯ್ದೆ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ.

ಕೇಂದ್ರ ಸರ್ಕಾರ ಮನ್ರೇಗಾಗೆ ಬದಲಾಗಿ VB-G RAM-G ಕಾಯ್ದೆ ಜಾರಿಗೊಳಿಸಿರುವುದಕ್ಕೆ ರಾಜ್ಯ ಸರ್ಕಾರ ಈಗಾಗಲೇ ವಿರೋಧ ವ್ಯಕ್ತಪಡಿಸಿ, ಎಂಎನ್‌ಆರ್‌ಇಜಿಎ ಪುನರ್ ಸ್ಥಾಪನೆಗೆ ಆಗ್ರಹಿಸಿತ್ತು.

ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಅವರು, “ಕೇಂದ್ರ ಸರ್ಕಾರ ಇನ್ನೂ ಹೊಸ ಯೋಜನೆ ಜಾರಿಗೆ ಸಂಬಂಧಿಸಿದ ಅಧಿಸೂಚನೆ ಅಥವಾ ಸ್ಪಷ್ಟ ಮಾರ್ಗಸೂಚಿಗಳನ್ನು ಪ್ರಕಟಿಸಿಲ್ಲ. ಹೀಗಾಗಿ ಜನರ ಹಿತದೃಷ್ಟಿಯಿಂದ ಸುಪ್ರೀಂ ಕೋರ್ಟ್ ಮೊರೆ ಹೋಗುವುದು ಅನಿವಾರ್ಯವಾಗಿದೆ,” ಎಂದು ಹೇಳಿದರು.

“ಪ್ರಸ್ತುತ ಹಣಕಾಸು ವರ್ಷಕ್ಕೆ ಕಾರ್ಯಯೋಜನೆ ರೂಪಿಸಿ ಮನ್ರೇಗಾ ಜಾರಿಗೆ ಅವಕಾಶ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಲಾಗುವುದು. ಜೊತೆಗೆ ಎಂಎನ್‌ಆರ್‌ಇಜಿಎ ಪುನರ್ ಸ್ಥಾಪನೆಗೂ ನಾವು ಆಗ್ರಹಿಸಲಾಗುವುದು,” ಎಂದು ತಿಳಿಸಿದರು.

ಕೇಂದ್ರ ಸರ್ಕಾರ ರಾಜ್ಯದ ಸಂವಿಧಾನಬದ್ಧ ಹಕ್ಕನ್ನು ಕಸಿದುಕೊಂಡಿದ್ದು, ಇದರ ಪರಿಣಾಮ ಕೃಷಿ ಕಾರ್ಮಿಕರ ಮೇಲೆ ದುಷ್ಪರಿಣಾಮ ಬೀರಿದೆ ಎಂದು ಇದೇ ವೇಳೆ ರಾಜ್ಯ ಸರ್ಕಾರ ಆರೋಪಿಸಿದೆ

SHARE
Loading spinner

Leave a Reply

Your email address will not be published. Required fields are marked *

error: Content is protected !!