ಉಡುಪಿ: ಗ್ಯಾಸ್‌ ದರ ಏರಿಕೆ ವಿರೋಧಿಸಿ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ: ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ

ಉಡುಪಿ: ವಾಣಿಜ್ಯ ಗ್ಯಾಸ್ ದರ ತೀವ್ರ ಏರಿಕೆ ವಿರುದ್ಧ ಇಂದು ಉಡುಪಿಯಲ್ಲಿ ಪ್ರತಿಭಟನೆ ನಡೆಯಿತು.ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಿಂದ ನಗರದ ಬ್ರಹ್ಮಗಿರಿ ಸರ್ಕಲ್ ನಲ್ಲಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಕಳೆದ ಮೂರು ತಿಂಗಳಲ್ಲಿ‌ ಮೂರು ಬಾರಿ ವಾಣಿಜ್ಯ ಗ್ಯಾಸ್ ಬೆಲೆ ಏರಿಸಲಾಗಿದೆ.ಈ ಬಾರಿ 993 ರೂ.ಏರಿಸಿದ್ದು ಸಾರ್ವಕಾಲಿಕ ದಾಖಲೆಯಾಗಿದೆ.

ಯುದ್ಧದ ನೆಪ ಹೇಳಿ ಈ ಮಟ್ಟದಲ್ಲಿ ಬೆಲೆ ಏರಿಸುವ ಮೂಲಕ ಕೇಂದ್ರ ಸರಕಾರ ಹೊಟೇಲ್ ಉದ್ಯಮಕ್ಕೆ ಭಾರೀ ಹೊಡೆತ ನೀಡಿದೆ ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕೇಂದ್ರದ ವಿರುದ್ಧ ಘೋಷಣೆಗಳನ್ನು ಕೂಗಿದರು.ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕೊಡವೂರು ,ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್ ,ಹರೀಶ್ ಕಿಣಿ ,ಸತೀಶ್ ಕೊಡವೂರು, ಕಿಶನ್ ಹೆಗ್ಡೆ ಕೊಳ್ಕೆಬೈಲು ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!