ಉಪ್ಪಿನಂಗಡಿಯಲ್ಲಿ ಭೀಕರ ದುರಂತ; ರೋಡ್ ರೋಲರ್ ಹರಿದು ಕಾರ್ಮಿಕ ಸಾವು

ಉಪ್ಪಿನಂಗಡಿ ಸಮೀಪದ ಗಾಂಧಿಪಾರ್ಕ್ ಬಳಿ ರಸ್ತೆ ಕಾಮಗಾರಿಯ ವೇಳೆ ರೋಡ್ ರೋಲರ್‌ನಡಿ ಸಿಲುಕಿ ವ್ಯಕ್ತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಭಾಗವಾಗಿ ಸರ್ವೀಸ್ ರಸ್ತೆಯ ನಿರ್ಮಾಣ ಕಾರ್ಯ ನಡೆಯುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಮೂಲಗಳ ಪ್ರಕಾರ, ಮೃತ ವ್ಯಕ್ತಿ ರಸ್ತೆ ಬದಿಯಲ್ಲಿ ಮಲಗಿದ್ದ ವೇಳೆ ರೋಡ್ ರೋಲರ್ ಆತನ ಮೇಲಿಂದ ಚಲಿಸಿದೆ ಎನ್ನಲಾಗಿದೆ.

ಅಪಘಾತದ ತೀವ್ರತೆಗೆ ವ್ಯಕ್ತಿಯ ದೇಹ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಉತ್ತರ ಭಾರತದ ಮೂಲದ ಕಾರ್ಮಿಕರಾಗಿರುವ ಶಂಕೆ ವ್ಯಕ್ತವಾಗಿದೆ.

ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!