ಬೈಕ್ ಹಾಗೂ ಕಾರು ನಡುವೆ ಅಪಘಾತ ನಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಜಂಕ್ಷನ್ನಲ್ಲಿ ಇಂದು ನಡೆದಿದೆ. ಕೊಕ್ಕಡದಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಹೋಗುತ್ತಿದ್ದ ಸ್ವಿಫ್ಟ್ ಕಾರಿನ ನಡುವೆ ಗೋಳಿತ್ತೊಟ್ಟು ಜಂಕ್ಷನ್ನಲ್ಲಿ ಅಪಘಾತ ನಡೆದಿದೆ.
ಈ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಸಹ ಸವಾರೆ ಗಂಭೀರ ಗಾಯಗೊಂಡಿದಾರೆ. ಮೃತಪಟ್ಟ ಬೈಕ್ ಸವಾರ ಅರಸಿನಮಕ್ಕಿ ನಿವಾಸಿ ಎಂದು ತಿಳಿದುಬಂದಿದ್ದು ಗಾಯಗೊಂಡಿರುವ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ತನಿಖೆ ನಡೆಯುತ್ತಿದೆ.