ಅಸ್ಸಾಂ ಸಿಎಂ ಆಗಿ ಹಿಮಂತ ಬಿಸ್ವಾ ಶರ್ಮಾ ಪ್ರಮಾಣ ವಚನ ಸತತ 2ನೇ ಬಾರಿಗೆ ಅಧಿಕಾರ ಸ್ವೀಕಾರ; ಸಮಾರಂಭದಲ್ಲಿ ಪ್ರಧಾನಿ ಮೋದಿ ಸೇರಿ ಹಲವು ಗಣ್ಯರ ಉಪಸ್ಥಿತಿ

ದಿಸ್ಪುರ, ಮೇ 12: Himanta Biswa Sharma ಅವರು ಇಂದು ಅಸ್ಸಾಂ ರಾಜ್ಯದ ಮುಖ್ಯಮಂತ್ರಿಯಾಗಿ ಸತತ ಎರಡನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದರು. ಖಾನಾಪಾರಾದ ವೆಟರಿನರಿ ಕಾಲೇಜು ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ Lakshman Prasad Acharya ಅವರು ಹಿಮಂತ ಬಿಸ್ವಾ ಶರ್ಮ ಅವರಿಗೆ ಹುದ್ದೆ ಮತ್ತು ಗೌಪ್ಯತಾ ಪ್ರಮಾಣವಚನ ಬೋಧಿಸಿದರು.

ಪ್ರಮಾಣವಚನ ಸಮಾರಂಭದಲ್ಲಿ ಪ್ರಧಾನಿ Narendra Modi, ಕೇಂದ್ರ ಗೃಹ ಸಚಿವ Amit Shah, ರಕ್ಷಣಾ ಸಚಿವ Rajnath Singh, ಕೇಂದ್ರ ಸಚಿವ Nitin Gadkari, ಸರ್ಬಾನಂದ ಸೋನೋವಾಲ್, ಪಬಿತ್ರಾ ಮಾರ್ಗೆರಿಟಾ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

ಇದರ ಜೊತೆಗೆ ಬಿಜೆಪಿ ಆಡಳಿತದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಪಕ್ಷದ ಹಿರಿಯ ನಾಯಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪ್ರಧಾನಿ ಮೋದಿ ಅವರು ಸಮಾರಂಭದ ಬಳಿಕ ಹಿಮಂತ ಬಿಸ್ವಾ ಶರ್ಮ ಅವರನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಹಿಮಂತ ಬಿಸ್ವಾ ಶರ್ಮ ಅವರ ತಾಯಿ ಮೃಣಾಲಿನಿ ದೇವಿ, ಪತ್ನಿ ರಿಣಿಕಿ ಭುಯಾನ್ ಶರ್ಮಾ, ಪುತ್ರ ನಂದಿಲ್ ಬಿಸ್ವ ಶರ್ಮಾ ಹಾಗೂ ಪುತ್ರಿ ಸುಕನ್ಯಾ ಶರ್ಮಾ ಸಹ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಎನ್‌ಡಿಎಗೆ ಸತತ ಮೂರನೇ ಅವಧಿ

ಈ ಪ್ರಮಾಣವಚನ ಸಮಾರಂಭದೊಂದಿಗೆ ಅಸ್ಸಾಂನಲ್ಲಿ ಎನ್‌ಡಿಎ ಮೈತ್ರಿಕೂಟದ ಸತತ ಮೂರನೇ ಸರ್ಕಾರ ಅಧಿಕಾರಕ್ಕೆ ಬಂದಿದೆ. ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ್ದ ಬಿಜೆಪಿ ನೇತೃತ್ವದ ಮೈತ್ರಿಕೂಟವು ಮತ್ತೆ ಸರ್ಕಾರ ರಚಿಸಿದೆ.

126 ಸದಸ್ಯ ಬಲದ ಅಸ್ಸಾಂ ವಿಧಾನಸಭೆಯಲ್ಲಿ ಎನ್‌ಡಿಎ ಮೈತ್ರಿಕೂಟವು 102 ಸ್ಥಾನಗಳನ್ನು ಗೆದ್ದು ಸ್ಪಷ್ಟ ಬಹುಮತ ಪಡೆದಿದೆ. ಇದರಲ್ಲೂ ಭಾರತೀಯ ಜನತಾ ಪಕ್ಷವು ಒಂಟಿಯಾಗಿ 82 ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. ಮೈತ್ರಿ ಪಕ್ಷಗಳಾದ ಅಸೋಮ್ ಗಣ ಪರಿಷತ್ ಮತ್ತು ಬೋಡೋಲ್ಯಾಂಡ್ ಪೀಪಲ್ಸ್ ಫ್ರಂಟ್ ತಲಾ 10 ಸ್ಥಾನಗಳನ್ನು ಗೆದ್ದಿವೆ.

ಅಭಿವೃದ್ಧಿಗೆ ಆದ್ಯತೆ: ಹಿಮಂತ ಬಿಸ್ವಾ ಶರ್ಮಾ

ಪ್ರಮಾಣವಚನ ಸ್ವೀಕಾರದ ಬಳಿಕ ಮಾತನಾಡಿದ ಹಿಮಂತ ಬಿಸ್ವಾ ಶರ್ಮಾ, ರಾಜ್ಯದ ಅಭಿವೃದ್ಧಿ, ಮೂಲಸೌಕರ್ಯ ವಿಸ್ತರಣೆ, ಉದ್ಯೋಗ ಸೃಷ್ಟಿ ಹಾಗೂ ಕಾನೂನು ಸುವ್ಯವಸ್ಥೆಗೆ ತಮ್ಮ ಸರ್ಕಾರ ಆದ್ಯತೆ ನೀಡಲಿದೆ ಎಂದು ಹೇಳಿದರು.

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಮುಂದುವರಿದ ಆಡಳಿತಕ್ಕೆ ಈ ಪ್ರಮಾಣವಚನ ಸಮಾರಂಭ ಮಹತ್ವದ ಘಟ್ಟವೆಂದು ರಾಜಕೀಯ ವಲಯದಲ್ಲಿ ಪರಿಗಣಿಸಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!