ಪುದುಚೇರಿ, ಮೇ 13: ಅಖಿಲ ಭಾರತ ಎನ್.ಆರ್. ಕಾಂಗ್ರೆಸ್ ನಾಯಕ ಎನ್. ರಂಗಸ್ವಾಮಿ ಅವರು ಬುಧವಾರ ಪುದುಚೇರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಕೆ. ಕೈಲಾಶ್ನಾಥನ್ ಅವರು ರಂಗಸ್ವಾಮಿ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು.
ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಬಿನ್ ಅವರ ಸಮ್ಮುಖದಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿ ನಾಯಕ ಎ. ನಮಶಿವಾಯಂ ಕೂಡ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಪ್ರಮಾಣವಚನ ಸ್ವೀಕಾರದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ರಂಗಸ್ವಾಮಿ, ಜನರಿಗೆ ಕೃತಜ್ಞತೆ ಸಲ್ಲಿಸಿದರು. ಹೊಸದಾಗಿ ರಚನೆಯಾದ ಎನ್ಡಿಎ ಸರ್ಕಾರ ಜನಪರ ಆಡಳಿತಕ್ಕೆ ಆದ್ಯತೆ ನೀಡಲಿದ್ದು, ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುವುದು ಎಂದು ಹೇಳಿದರು.