ಬೆಂಗಳೂರು, ಮೇ 15: ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಪ್ರತಿ ಲೀಟರ್ಗೆ ಸುಮಾರು ₹3ರಷ್ಟು ಹೆಚ್ಚಳ ಮಾಡಲಾಗಿದೆ. ತೈಲ ಕಂಪನಿಗಳು ಶುಕ್ರವಾರ ಬೆಳಗ್ಗೆ ಹೊಸ ದರಗಳನ್ನು ಪ್ರಕಟಿಸಿದ್ದು, ತಕ್ಷಣದಿಂದಲೇ ಜಾರಿಗೆ ಬಂದಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್ಗೆ ₹94.77ರಿಂದ ₹97.77ಕ್ಕೆ ಏರಿಕೆಯಾದರೆ, ಡೀಸೆಲ್ ದರ ₹87.67ರಿಂದ ₹90.67ಕ್ಕೆ ಹೆಚ್ಚಳವಾಗಿದೆ.ಇನ್ನು ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್ಗೆ ₹3.27 ಏರಿಕೆಯಾಗಿದ್ದು, ಡೀಸೆಲ್ ದರ ಲೀಟರ್ಗೆ ₹3.12 ಹೆಚ್ಚಳವಾಗಿದೆ.
ಈ ಹಿಂದೆ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ ₹102.90 ಇತ್ತಾದರೆ, ಇದೀಗ ₹106.17ಕ್ಕೆ ಏರಿಕೆಯಾಗಿದೆ. ಅದೇ ರೀತಿ ಡೀಸೆಲ್ ದರ ₹90.98ರಿಂದ ₹94.10ಕ್ಕೆ ಹೆಚ್ಚಳವಾಗಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರ ಏರಿಕೆ, ರೂಪಾಯಿ ಮೌಲ್ಯದ ವ್ಯತ್ಯಾಸ ಹಾಗೂ ಸಾಗಾಟ ವೆಚ್ಚ ಹೆಚ್ಚಳದ ಪರಿಣಾಮ ಇಂಧನ ದರ ಪರಿಷ್ಕರಣೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇಂಧನ ದರ ಏರಿಕೆಯಿಂದ ಸಾರ್ವಜನಿಕ ಸಾರಿಗೆ, ಅಗತ್ಯ ವಸ್ತುಗಳ ಸಾಗಾಟ ಹಾಗೂ ದಿನನಿತ್ಯದ ಖರ್ಚಿನ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದ್ದು, ಜನರಲ್ಲಿ ಆತಂಕ ಮೂಡಿಸಿದೆ.