ಮಂಗಳೂರು, ಮೇ 15: ಕರ್ನಾಟಕ ಗೇರು ಅಭಿವೃದ್ಧಿ ನಿಗಮ ವತಿಯಿಂದ ಹಮ್ಮಿಕೊಂಡಿರುವ ‘ಗೇರು ಮೇಳ-2026’ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳು ಮೇ 17ರಂದು ನಗರದ ಕದ್ರಿ ಪಾರ್ಕ್‌ನಲ್ಲಿ ನಡೆಯಲಿವೆ.
ಚಿತ್ರಕಲಾ ಸ್ಪರ್ಧೆ, ಭಾಷಣ ಸ್ಪರ್ಧೆ ಹಾಗೂ ರಂಗೋಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನಿಗಮ ಮನವಿ ಮಾಡಿದೆ.
ಕರ್ನಾಟಕ ಗೇರು ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಕರ್ನಾಟಕ ಅರಣ್ಯ ಇಲಾಖೆಯ ಸಹಯೋಗದಲ್ಲಿ ‘ಕರ್ನಾಟಕ ಗೇರು ಮೇಳ ಮತ್ತು ಕಾರ್ಯಾಗಾರ-2026’ ಮೇ 17 ಮತ್ತು 18ರಂದು ಕದ್ರಿ ಉದ್ಯಾನವನದಲ್ಲಿ ನಡೆಯಲಿದೆ.
ಮೇಳಕ್ಕೆ ಆಗಮಿಸುವ ಸಾರ್ವಜನಿಕರಲ್ಲಿ ಅಗತ್ಯವಿರುವವರಿಗೆ ಉಚಿತವಾಗಿ ಗೇರು ಗಿಡಗಳನ್ನು ವಿತರಿಸಲಾಗುವುದು ಎಂದು ನಿಗಮದ ಅಧ್ಯಕ್ಷೆ ಮಮತಾ ಡಿ. ಗಟ್ಟಿ ತಿಳಿಸಿದ್ದಾರೆ.