ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್‌ನಲ್ಲಿ ಬಿಎ ಮೀಡಿಯಾ ಮತ್ತು ಕಮ್ಯುನಿಕೇಶನ್ ಕೋರ್ಸ್‌ಗೆ ಪ್ರವೇಶಮಾಧ್ಯಮ, ಚಿತ್ರರಂಗ ಹಾಗೂ ಡಿಸೈನ್ ಕ್ಷೇತ್ರದಲ್ಲಿ ವೃತ್ತಿಜೀವನಕ್ಕೆ ಅವಕಾಶ

ಮಂಗಳೂರು: NITTE Deemed to be University ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್‌ನಲ್ಲಿ ಬಿಎ (ಆನರ್ಸ್) ಮೀಡಿಯಾ ಮತ್ತು ಕಮ್ಯುನಿಕೇಶನ್ ಕೋರ್ಸ್‌ಗೆ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ.

ಚಿತ್ರರಂಗ, ಪತ್ರಿಕೋದ್ಯಮ, ಜಾಹೀರಾತು ಹಾಗೂ ಡಿಸೈನ್ ಕ್ಷೇತ್ರಗಳಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಈ ಕೋರ್ಸ್ ವಿಶೇಷ ಅವಕಾಶ ಕಲ್ಪಿಸಲಿದೆ. ವಿದ್ಯಾರ್ಥಿಗಳ ಸೃಜನಶೀಲತೆ ಮತ್ತು ಸಂವಹನ ಕೌಶಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಸಂಸ್ಥೆ ಅತ್ಯಾಧುನಿಕ ತರಬೇತಿ ಸೌಲಭ್ಯಗಳನ್ನು ಒದಗಿಸುತ್ತಿದೆ.

ಭಾರತದಲ್ಲೇ ಏಕೈಕ Godox ಪ್ರಮಾಣಿತ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್, ಮಾಧ್ಯಮ ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟ ಸ್ಥಾನ ಪಡೆದಿದೆ. ಇಲ್ಲಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಕಲಿಕೆ, ತಾಂತ್ರಿಕ ತರಬೇತಿ ಹಾಗೂ ಕೈಗಾರಿಕಾ ಸಂಪರ್ಕಕ್ಕೂ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.

ಆಸಕ್ತ ವಿದ್ಯಾರ್ಥಿಗಳು apply.nitte.edu.in ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ 95131 88844 ಸಂಖ್ಯೆಯನ್ನು ಸಂಪರ್ಕಿಸಬಹುದು.

SHARE
Loading spinner

Leave a Reply

Your email address will not be published. Required fields are marked *

error: Content is protected !!