ಬಂಟ್ವಾಳ: ಸ್ಕೂಟರ್ ಸ್ಕಿಡ್ – ಸವಾರ ಮೃತ್ಯು

ಬಂಟ್ವಾಳ: ಸ್ಕೂಟರ್ ಸ್ಕಿಡ್ ಆಗಿ ನಡೆದ ಅಪಘಾತದಲ್ಲಿ ಸವಾರನೋರ್ವ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ರಸ್ತೆಯ ರಾಮಲ್ ಕಟ್ಟೆ ಟೋಲ್ ಗೇಟ್ ಸಮೀಪ ನಡೆದಿದೆ.


ಪಿ.ಸೋಮನಾಥ ಪ್ರಭು( 65) ಎಂಬವರು ಮೃತಪಟ್ಟ ವ್ಯಕ್ತಿ.ಅವರು ಮಂಗಳೂರು ಕಡೆಯಿಂದ ಬಿಸಿರೋಡು ಕಡೆಗೆ ಬರುವ ಸಂದರ್ಭದಲ್ಲಿ ರಾಮಲ್ ಕಟ್ಟೆ ಟೋಲ್ ಗೇಟ್ ಸಮೀಪ ಸ್ಕೂಟರ್ ಸ್ಕಿಡ್ ಆಗಿ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ ಇವರನ್ನು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಇವರಿಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ತಿಳಿಸಿದ್ದಾರೆ.ಇವರು ಹಿರಿಯ ಛಾಯಾಗ್ರಾಹಕರಾಗಿದ್ದ ಇವರು ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಣತಿ ಹೊಂದಿದ್ದರು ಎಂದು ಹೇಳಲಾಗಿದೆ.
ಸಾಮಾಜಿಕವಾಗಿ ಗುರುತಿಸಿಕೊಂಡಿದ್ದ ಇವರು ಬಂಟ್ವಾಳದ ಚಿರಪರಿಚಿತ ವ್ಯಕ್ತಿಯಾಗಿದ್ದಾರೆ.ಪಾಣೆಮಂಗಳೂರು ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!