ಮಂಗಳೂರು: ಕಾರಿನಲ್ಲಿ ಜಾನುವಾರು ಸಾಗಾಟ – ಇಬ್ಬರು ಬಂಧನ

ಮಂಗಳೂರು: ಐಷಾರಾಮಿ ಕಾರಿನಲ್ಲಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮೂಡಬಿದ್ರೆ ಪೊಲೀಸರು ಸಿನಿಮಾ ಶೈಲಿಯಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ.ಪಡುಮಾರ್ನಾಡು ಗ್ರಾಮದ ಗುಂಡುಕಲ್ಲು ಕ್ರಾಸ್ ಬಳಿ ಈ ಕಾರ್ಯಾಚರಣೆ ನಡೆದಿದೆ.

ಮೂಡಬಿದ್ರೆ ಹಂಡೇಲು ನಿವಾಸಿ ಮಹಮ್ಮದ್ ಆರಿಫ್ ಮತ್ತು ಗಂಟಾಲಕಟ್ಟೆಯ ಇಮ್ರಾನ್ ಅಲಿಯಾಸ್ ಇಬ್ರಾಹಿಂ ಬಂಧಿತ ಆರೋಪಿಗಳು. ಇವರಿಂದ ಮಾರುತಿ ಬ್ರೀಜಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ಪೊಲೀಸರು ರೌಂಡ್ಸ್‌ನಲ್ಲಿದ್ದಾಗ ಖಚಿತ ಮಾಹಿತಿ ಮೇರೆಗೆ ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಬ್ರೀಜಾ ಕಾರನ್ನು ನಿಲ್ಲಿಸಲು ಸೂಚಿಸಿದಾಗ, ಆರೋಪಿಗಳು ಕಾರನ್ನು ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾರೆ. ತಕ್ಷಣ ಎಚ್ಚೆತ್ತ ಪೊಲೀಸರು ಆರೋಪಿಗಳ ಕಾರನ್ನು ಬೆನ್ನಟ್ಟಿದ್ದಾರೆ. ತಪ್ಪಿಸಿಕೊಳ್ಳಲು ದಾರಿಯಿಲ್ಲದೆ ಆರೋಪಿಗಳು ಮನೆಯೊಂದರ ಕಂಪೌಂಡ್ ಒಳಗೆ ಕಾರು ನುಗ್ಗಿಸಿ ಓಡಿಹೋಗಲು ಯತ್ನಿಸಿದಾಗ ಪೊಲೀಸರು ಅವರನ್ನು ಸುತ್ತುವರೆದು ಹಿಡಿಯುವಲ್ಲಿ ಯಶಸ್ವಿಯಾದರು.

ಕಾರನ್ನು ತಪಾಸಣೆ ನಡೆಸಿದಾಗ ಹಿಂಭಾಗದಲ್ಲಿ ಜಾನುವಾರುಗಳ ಕಾಲು ಮತ್ತು ತಲೆಯನ್ನು ಕಟ್ಟಿ ಹಿಂಸಾತ್ಮಕವಾಗಿ ಕೂಡಿ ಹಾಕಿರುವುದು ಪತ್ತೆಯಾಗಿದೆ. ಇವರು ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸ ಮಾರಾಟಕ್ಕಾಗಿ ಅಥವಾ ಅಕ್ರಮವಾಗಿ ಸಾಗಿಸುತ್ತಿದ್ದರು ಎಂದು ಶಂಕಿಸಲಾಗಿದೆ.

ಬಂಧಿತರ ವಿರುದ್ಧ ಗೋಹತ್ಯೆ ತಡೆ ಕಾಯ್ದೆ, ದನ ಕಳ್ಳತನ ಹಾಗೂ ಪ್ರಾಣಿ ಹಿಂಸೆ ಪ್ರಕರಣಗಳ ಅಡಿ ಮೊಕದ್ದಮೆ ದಾಖಲಿಸಲಾಗಿದೆ. ಆರೋಪಿಗಳ ಮೇಲೆ ಈಗಾಗಲೇ ವಿವಿಧ ಠಾಣೆಗಳಲ್ಲಿ ಹಲವು ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ ಎಂದು ಪೊಲೀಸರು ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!