ಕೇರಳ ರಾಜ್ಯದ ನಿಯೋಜಿತ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರು ಪ್ರಮಾಣವಚನ ಸ್ವೀಕರಿಸಿದ ಸಮಾರಂಭವು ಇಂದು ಭವ್ಯವಾಗಿ ನೆರವೇರಿತು. ಈ ಮಹತ್ವದ ಕಾರ್ಯಕ್ರಮದಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಹಾಗೂ ರಾಜ್ಯಸಭಾ ಸದಸ್ಯರಾದ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದರು.
ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಶಾಸಕರಾದ ಡಾ. ಮಂಜುನಾಥ ಭಂಡಾರಿ ಕೂಡ ಉಪಸ್ಥಿತರಿದ್ದು ಸಮಾರಂಭದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.
ಸಮಾರಂಭದ ಅಂಗವಾಗಿ ಡಾ. ಮಂಜುನಾಥ ಭಂಡಾರಿಯವರು ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಹಾಗೂ ಸಂಸದೆಯಾದ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಭೇಟಿಯಾಗಿ ಶುಭಾಶಯ ವಿನಿಮಯ ಮಾಡಿಕೊಂಡರು.
ಎನ್ಎಸ್ಯುಐ ಸಂಘಟನೆಯಿಂದ ರಾಜಕೀಯ ಜೀವನ ಆರಂಭಿಸಿದ ಡಾ. ಮಂಜುನಾಥ ಭಂಡಾರಿಯವರು, ತಮ್ಮ ಸಂಘಟನೆ ಕೌಶಲ್ಯ, ನಾಯಕತ್ವ ಹಾಗೂ ಕಾರ್ಯಕರ್ತರನ್ನು ಬೆಳೆಸುವ ಶೈಲಿಯಿಂದ ವಿಶಿಷ್ಟ ಗುರುತನ್ನು ಪಡೆದಿದ್ದಾರೆ. ರಾಷ್ಟ್ರೀಯ ಮಟ್ಟದ ನಾಯಕರೊಂದಿಗೆ ಹೊಂದಿರುವ ಸ್ನೇಹಪೂರ್ವಕ ಬಾಂಧವ್ಯ ಹಾಗೂ ವಿ.ಡಿ. ಸತೀಶನ್ ಅವರೊಂದಿಗೆ ಇರುವ ಆತ್ಮೀಯತೆ ಗಮನಾರ್ಹವಾಗಿದೆ.
ಯುವ ನಾಯಕರಿಗೆ ಪ್ರೋತ್ಸಾಹ ನೀಡುವುದು, ತಳಮಟ್ಟದ ಕಾರ್ಯಕರ್ತರನ್ನು ಗುರುತಿಸಿ ಬೆಳೆಸುವುದು ಹಾಗೂ ಪಕ್ಷ ಸಂಘಟನೆಯನ್ನು ಬಲಪಡಿಸುವಲ್ಲಿ ಡಾ. ಮಂಜುನಾಥ ಭಂಡಾರಿಯವರ ಪಾತ್ರ ಕಾಂಗ್ರೆಸ್ ಪಕ್ಷಕ್ಕೆ ಮಹತ್ವದ ಕೊಡುಗೆಯಾಗಿದೆ ಎಂಬ ಅಭಿಪ್ರಾಯಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.