ಮಹಿಂದ್ರಾ ಪಿಕಪ್ ವಾಹನ ಮತ್ತು ಆಕ್ಟಿವಾ ದ್ವಿಚಕ್ರ ವಾಹನದ ನಡುವೆ ಅಪಘಾತ ನಡೆದ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಇಂದು ನಡೆದಿದೆ. ದ್ವಿಚಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡಿದ್ದು ಇವ್ರನ್ನು ಸ್ಥಳೀಯ ನಿವಾಸಿ ಸಲೀಂ ಎಂದು ಗುರುತಿಸಲಾಗಿದೆ.
ಕಬಕ ಕಡೆಯಿಂದ ಮಿತ್ತೂರು ಕಡೆಗೆ ಹೋಗುತ್ತಿದ್ದ ಮಹಿಂದ್ರಾ ಪಿಕಪ್ ವಾಹನ ಸಲೀಂ ರವರು ಸಂಚರಿಸುತ್ತಿದ್ದ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ಸಲೀಂರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಕೂಟರ್ಗೆ ಡಿಕ್ಕಿ ಹೊಡೆದ ಬಳಿಕ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ರಸ್ತೆ ಬದಿಗೆ ಪಲ್ಟಿಯಾಗಿದೆ.