ಮಂಗಳೂರು:ಶಾಲಾ–ಕಾಲೇಜುಗಳಲ್ಲಿ ಹಿಜಾಬ್ಗೆ ಅವಕಾಶ ನೀಡಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ವಿಶ್ವ ಹಿಂದೂ ಪರಿಷತ್ ಮುಖಂಡರಾದ ಶರಣ್ ಪಂಪ್ವೆಲ್ ತೀವ್ರ ವಿರೋಧವನ್ನು ವ್ಯಕ್ತಪಡಿಸಿದ್ದಾರೆ .
ಮಾಧ್ಯಮ ಮಿತ್ರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಶಿಕ್ಷಣ ಸಂಸ್ಥೆಗಳಲ್ಲಿ ಪವಿತ್ರತೆ ಮತ್ತು ಸಮಾನತೆಯ ವಾತಾವರಣ ಕಾಪಾಡಬೇಕಾದ ಸರ್ಕಾರವೇ ಇದೀಗ ಹಿಜಾಬ್ಗೆ ಅವಕಾಶ ನೀಡುವ ಮೂಲಕ ಮತಾಂಧತೆಗೆ ಬೆಂಬಲ ನೀಡುತ್ತಿರುವಂತೆ ಕಾಣುತ್ತಿದೆ ಎಂದು ಟೀಕಿಸಿದರು.
“ಇದು ಸ್ಪಷ್ಟವಾದ ಓಲೈಕೆ ರಾಜಕಾರಣದ ನೀತಿಯಾಗಿದೆ. ಸರ್ಕಾರದ ಈ ನಿರ್ಧಾರವನ್ನು ಯುವಜನತೆ ಮತ್ತು ವಿದ್ಯಾರ್ಥಿಗಳು ಖಂಡಿಸಬೇಕು. ಸರ್ಕಾರ ಮಾಡುತ್ತಿರುವುದು ಸರಿಯಲ್ಲ ಎಂಬುದನ್ನು ಪ್ರತಿಭಟನೆಗಳ ಮೂಲಕ ವ್ಯಕ್ತಪಡಿಸಬೇಕು” ಎಂದರು . ಹಿಜಾಬ್ ವಿಚಾರವಾಗಿ ಪ್ರತಿಭಟನೆ ನಡೆಸುವ ಯುವಶಕ್ತಿ ಹಾಗೂ ವಿದ್ಯಾರ್ಥಿಗಳಿಗೆ ವಿಶ್ವ ಹಿಂದೂ ಪರಿಷತ್, ಬಜರಂಗದಳ ಸೇರಿದಂತೆ ವಿವಿಧ ಸಂಘಟನೆಗಳು ಸಂಪೂರ್ಣ ಬೆಂಬಲ ನೀಡಲಿವೆ ಎಂದು ತಿಳಿಸಿದರು.
“ಸಾಕಷ್ಟು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಶಾಲಾ–ಕಾಲೇಜುಗಳಿಗೆ ಬರಲು ಸಿದ್ಧರಾಗಿದ್ದಾರೆ. ಈ ವಿಚಾರದಲ್ಲಿ ಹಿಂದೂ ಸಂಘಟನೆಗಳ ಬೆಂಬಲವೂ ಇದೆ” ಎಂದರು . ಕರ್ನಾಟಕದ ಹಲವು ಭಾಗಗಳಲ್ಲಿ ಹಿಜಾಬ್ ವಿವಾದ ಉದ್ವಿಗ್ನತೆ ಸೃಷ್ಟಿಸಿದ್ದರೂ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆ ಸಂದರ್ಭ ಯಾವುದೇ ಅಹಿತಕರ ಘಟನೆಗಳು ನಡೆದಿರಲಿಲ್ಲ ಎಂದು ಅವರು ನೆನಪಿಸಿದರು.
ಆದರೆ ಯಾರಾದರೂ ಉದ್ದೇಶಪೂರ್ವಕವಾಗಿ ವಿದ್ಯಾರ್ಥಿಗಳನ್ನು ಪ್ರಚೋದಿಸಿ, ಹಿಜಾಬ್ ಧರಿಸಿ ಶಾಲೆಗಳಿಗೆ ಬರುವಂತೆ ಕರೆ ನೀಡಿ ಶಾಂತಿ ಭಂಗಕ್ಕೆ ಯತ್ನಿಸಿದರೆ, ಅದರ ವಿರುದ್ಧ ನಾವು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತೇವೆ ಎಂದರು .
ಈ ಸಂದರ್ಭದಲ್ಲಿ ಗೌರವ ಸಂಚಾಲಕರಾದ ಡಾ| ಶ್ರೀ ಹರಿಕೃಷ್ಣ ಪುನರೂರು, ನಿರ್ದೇಶಕರು ಶ್ರೀ ವರ್ಕಾಡಿ ರವಿ ಅಲೆವೂರಾಯ, ಶ್ರೀ ಸುಧಾಕರ ರಾವ್ ಪೇಜಾವರ, ಶ್ರೀ ವರ್ಕಾಡಿ ಮಧುಸೂದನ ಅಲೆವೂರಾಯ, ಶ್ರೀ ವರ್ಕಾಡಿ ಮಾಧವ ನಾವಡ, ಸರಯೂ ಮಹಿಳಾ ತಂಡದ ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮೀ ಎಲ್.ಎನ್., ಶ್ರೀ ಪ್ರಮೋದ್ ಮತ್ತು ಶ್ರೀ ಗೌತಂ ಭಂಡಾರಿ ಉಪಸ್ಥಿತರಿದ್ದರು