ಮೇ 24ರಂದು ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆ

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪ್ರೆಸ್ ಕ್ಲಬ್ ದಿನಾಚರಣೆ ಮೇ 24 ರಂದು ಬೆಳಗ್ಗೆ 10 ಕ್ಕೆ ನಗರದ ರೆಡ್ ಕ್ರಾಸ್ ಶತಮಾನೋತ್ಸವ ಭವನದ ಪ್ರೇರಣಾ ಸಭಾಂಗಣದಲ್ಲಿ ನಡೆಯಲಿದೆ. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

2025 ನೇ ಸಾಲಿನ ಮಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿರುವ ಸಮಾಜ ಸೇವಕ ದೀಪಕ್.ಜಿ.ಬೆಳ್ತಂಗಡಿ ಇವರಿಗೆ ಮಂಗಳೂರು ನಗರ ಪೊಲೀಸ್ ಕಮಿಷನರೆಟ್‌ನ ಉಪ ಪೊಲೀಸ್ ಆಯುಕ್ತ ಎಚ್.ಎನ್.ಮಿಥುನ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ.

ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶ ಬಿ.ಎ.ಖಾದರ್ ಶಾ ಹಿರಿಯ ಪತ್ರಕರ್ತರಿಗೆ ಗೌರವ ಸನ್ಮಾನ ಹಾಗೂ ದ.ಕ.ಜಿಲ್ಲಾ ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಲಿದ್ದಾರೆ. ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್.ಬಿ.ಎನ್., ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರೆಸ್ ಕ್ಲಬ್‌ನ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!