ಕರುನಾಡ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಬಳಗ(ರಿ), ಬೆಂಗಳೂರು ವತಿಯಿಂದ ನೀಡಲಾಗುವ ರಾಜ್ಯ ಮಟ್ಟದ “ಕರುನಾಡ ಕನ್ನಡ ಗಡಿನಾಡು ಪೋಷಕ ರತ್ನ” ಪ್ರಶಸ್ತಿಗೆ ಗಡಿನಾಡು ಕಾಸರಗೋಡಿನ ಕನ್ನಡ ಸೇವಾ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸುತ್ತಿರುವ ಡಾ. ವಾಮನ್ ರಾವ್ ಬೇಕಲ್ ಹಾಗೂ ಶ್ರೀಮತಿ ಸಂಧ್ಯಾರಾಣಿ ಟೀಚರ್ ದಂಪತಿ ಆಯ್ಕೆಯಾಗಿದ್ದಾರೆ.
ಮೇ 25ರಂದು ಹಾವೇರಿ ಜಿಲ್ಲೆಯ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಎರಡನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಗಡಿನಾಡು ಕಾಸರಗೋಡಿನ ಕನ್ನಡ ಸೇವಾ ಸಂಸ್ಥೆ ‘ಕನ್ನಡ ಭವನ ಮತ್ತು ಗ್ರಂಥಾಲಯ (ರಿ.)’ ಹಾಗೂ ಸಮೂಹ ಸಂಸ್ಥೆಗಳ ರೂವಾರಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಇವರ ಅಪ್ರತಿಮ ಕನ್ನಡ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ಘೋಷಿಸಲಾಗಿದೆ ಎಂದು ಸಂಘಟನೆಯ ಪ್ರಕಟಣೆ ತಿಳಿಸಿದೆ.
ಪ್ರಶಸ್ತಿ ಸ್ವೀಕರಿಸಲು ಕಾರ್ಯಕ್ರಮಕ್ಕೆ ಆಗಮಿಸುವಂತೆ ಕರುನಾಡ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಬಳಗದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ದೊಡ್ಡಮನಿ ಹಾಗೂ ಸಂಸ್ಥಾಪಕ ರಾಜ್ಯಾಧ್ಯಕ್ಷ ಎಸ್. ಡಿ. ಮುಡೆಣ್ಣವರ ಮನವಿ ಮಾಡಿದ್ದಾರೆ.