ಜಲಪಾತಕ್ಕೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ: ಮೂವರು ಬಂಧನ

ಬೆಳ್ತಂಗಡಿ: ಜಲಪಾತಕ್ಕೆ ತೆರಳಿದ್ದ ವೇಳೆ ಮೂವರು ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮೂವರು ಯುವಕರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ.

ಬಂಧಿತರನ್ನು ಕೇರಳದ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಾಫ್ (36), ಫೈಜಲ್ ಅದಿಲ್ (27) ಹಾಗೂ ಉಸ್ಮಾನ್ ಸಾಲೀಂ (18) ಎಂದು ಗುರುತಿಸಲಾಗಿದೆ.

ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರು, ಆರೋಪಿಗಳಾದ ಈ ಮೂವರು ಯುವಕರೊಂದಿಗೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಜಲಪಾತಕ್ಕೆ ತೆರಳಿದ್ದರು. ಈ ವೇಳೆ ಯುವಕರು ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಲಾಗಿದೆ.

ಯುವತಿಯರು ಇದಕ್ಕೆ ತೀವ್ರ ಪ್ರತಿರೋಧ ವ್ಯಕ್ತಪಡಿಸಿದ್ದು, ಸ್ಥಳದಲ್ಲಿದ್ದ ಸಾರ್ವಜನಿಕರು ಆರೋಪಿಗಳನ್ನು ತಡೆದು ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದಾರೆ.

ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 60/2026ರಂತೆ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!