“ಪಹಲ್ಗಾಮ್‌ನಲ್ಲಿ ಮುಗ್ಧ ಪ್ರವಾಸಿಗರ ಮೇಲೆ ನಡೆದ ಕ್ರೂರ ದಾಳಿ ನಿಜಕ್ಕೂ ಹೃದಯ ವಿದ್ರಾವಕ. ಇದು ಕೇವಲ ವ್ಯಕ್ತಿಗಳ ಮೇಲಿನ ದಾಳಿಯಲ್ಲ, ಬದಲಾಗಿ ನಮ್ಮ ರಾಷ್ಟ್ರದ ಸ್ಫೂರ್ತಿಯ ಮೇಲಿನ ದಾಳಿ. ಇದು ಸಂಯಮದ ಸಮಯವಲ್ಲ, ಬಲವಾದ ಮತ್ತು ಸ್ಪಷ್ಟವಾದ ಪ್ರತಿಕ್ರಿಯೆ ನೀಡಬೇಕಾದ ಸಮಯ” ಎಂದು ಸುದೀಪ್ ಆಕ್ರೋಶ ಹೊರ ಹಾಕಿದ್ದಾರೆ.
ಪ್ರಧಾನಿ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಟ್ಯಾಗ್ ಮಾಡಿ “ಈ ಹೇಡಿತನದ ಕೃತ್ಯದ ಹಿಂದಿರುವವರಿಗೆ ತಕ್ಕ ಬುದ್ಧಿ ಕಲಿಸಬೇಕು ಎಂದು ನಾನು ನಿಮ್ಮನ್ನು ಒತ್ತಾಯಿಸುತ್ತೇನೆ” ಎಂದು ಸುದೀಪ್ ಬರೆದುಕೊಂಡಿದ್ದಾರೆ. ಸದ್ಯ ಸುದೀಪ್ ‘ಬಿಲ್ಲ ರಂಗ ಬಾಷ’ ಚಿತ್ರದ ಚಿತ್ರೀಕರಣದಲ್ಲಿ ಭಾಗಿ ಆಗಿದ್ದಾರೆ. ‘ಹೆಬ್ಬುಲಿ’ ಚಿತ್ರದಲ್ಲಿ ಸುದೀಪ್ ಸೈನಿಕನ ಪಾತ್ರದಲ್ಲಿ ನಟಿಸಿದ್ದರು.