ನಿರ್ಮಾಣ ಹಂತದ ಬಾವಿಯ ದಂಡೆಯ ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವು

ಉಡುಪಿ: ನಿರ್ಮಾಣ ಹಂತದ ಬಾವಿ ಕುಸಿದ ಪರಿಣಾಮ ಮಣ್ಣಿನಡಿ ಸಿಲುಕಿ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಮಲ್ಪೆ ಕೊಡವೂರು ಸಮೀಪದ ಉದ್ದಿನಹಿತ್ಲು ಎಂಬಲ್ಲಿ ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ಸಂಭವಿಸಿದೆ.


ಕಾರ್ಮಿಕ ಕೊಪ್ಪಳ ಮೂಲದ ರಮೇಶ್ (25) ಮೃತದುರ್ದೈವಿ. ಕಾರ್ಮಿಕರು ಬಾವಿಯಿಂದ ಮಣ್ಣು ತೆಗೆಯುವ ಕೆಲಸ ಮಾಡುತ್ತಿದ್ದರು. ಸಂಜೆ ಕೆಲಸ ಬಿಡುವ ವೇಳೆ ರಮೇಶ ಬಾವಿಯಲ್ಲಿ ಮಣ್ಣು ತೆಗೆಯುತ್ತಿರುವಾಗ ಬಾವಿಯ ದಂಡೆಯ ಮಣ್ಣು ಒಮ್ಮೆಲೆ ಕುಸಿದಿದ್ದು, ಇದರಿಂದ ರಮೇಶ ಅವರ ಮೈಮೇಲೆ ಮಣ್ಣು ಬಿದ್ದು, ಅವರು ಮಣ್ಣಿನಲ್ಲಿ ಹೂತು ಹೋದರು ಎನ್ನಲಾಗಿದೆ‌. ಈ ವೇಳೆ ಬಾವಿಯಲ್ಲಿದ್ದ ಇನ್ನೋರ್ವ ಕಾರ್ಮಿಕ ಕೂಡಲೇ ಮೇಲೆ ಬಂದು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ಮಲ್ಪೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮಣ್ಣಿನಡಿ ಸಿಲುಕಿರುವ ಕಾರ್ಮಿಕನಿಗಾಗಿ ಶೋಧ ಕಾರ್ಯಾಚರಣೆ ನಡೆಸಿದರು.


ಸುಮಾರು ಐದು ಅಡಿ ಆಳದಲ್ಲಿ ಸಿಲುಕಿರುವ ಕಾರ್ಮಿಕನ ಮೃತದೇಹ ಪತ್ತೆ ಕಾರ್ಯಚರಣೆಗೆ ಪದೇ ಪದೇ ಮಣ್ಣು ಕುಸಿಯುತ್ತಿರುವುದರಿಂದ ಅಡ್ಡಿಯಾಯಿತು. ಸತತ ಏಳು ಗಂಟೆಗಳ ಕಾರ್ಯಾಚರಣೆ ಬಳಿಕ ಮಣ್ಣಿನ ಸಿಲುಕಿದ್ದ ಕಾರ್ಮಿಕನ ಮೃತದೇಹವನ್ನು ಹೊರತೆಗೆಯಲಾಯಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!