ದಕ್ಷಿಣ ಕನ್ನಡ ಜಿಲ್ಲೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ … !

ಮಂಗಳೂರು : ಭಾರತದ ಉಪರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್ ಅವರು ಮೇ 30 ಹಾಗೂ 31ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿ ಇರಲಿದ್ದಾರೆ .

ಅಧಿಕೃತ ಕಾರ್ಯಕ್ರಮದ ಪ್ರಕಾರ, ಮೇ 30ರಂದು ಸಂಜೆ 4:25ಕ್ಕೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಉಪರಾಷ್ಟ್ರಪತಿಗಳು, ಬಳಿಕ ಸಂಜೆ 5:05ಕ್ಕೆ ಧರ್ಮಸ್ಥಳ ಹೆಲಿಪ್ಯಾಡ್ ತಲುಪಲಿದ್ದಾರೆ. ನಂತರ ಅವರು ಧರ್ಮಸ್ಥಳ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಮೇ 31ರಂದು ಬೆಳಿಗ್ಗೆ 8 ಗಂಟೆಗೆ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನ ಧರ್ಮಸ್ಥಳ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಬೆಳಿಗ್ಗೆ 11 ಗಂಟೆಗೆ ಬೆಳ್ತಂಗಡಿಯಲ್ಲಿ ನಡೆಯಲಿರುವ ಸಿರಿ ಇಂಡಸ್ಟ್ರಿಯಲ್ ಪಾರ್ಕ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 2:25ಕ್ಕೆ ಧರ್ಮಸ್ಥಳ ಹೆಲಿಪ್ಯಾಡ್‌ನಿಂದ ಹೊರಟು, 3:05ಕ್ಕೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. ಬಳಿಕ ಮಧ್ಯಾಹ್ನ 3:15ಕ್ಕೆ ಮಂಗಳೂರಿನಿಂದ ಕೇರಳದ ಕಣ್ಣೂರಿಗೆ ಪ್ರಯಾಣ ಬೆಳೆಸಲಿದ್ದಾರೆ.’

SHARE
Loading spinner

Leave a Reply

Your email address will not be published. Required fields are marked *

error: Content is protected !!