ಅಂಬೇಡ್ಕರ್ ನಗರ ಕುಬಣೂರಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಅಂಬೇಡ್ಕರ್ ನಗರ ಕುಬಣೂರಿನ ಡಾ. ಬಿ.ಆರ್. ಅಂಬೇಡ್ಕರ್ ಕಲಾ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಹಾಗೂ ಕಲಿಕೋಪಕರಣ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಅಂಗನವಾಡಿಯಿಂದ ಎಸ್‌ಎಸ್‌ಎಲ್‌ಸಿ ವರೆಗಿನ ಸುಮಾರು 60 ವಿದ್ಯಾರ್ಥಿಗಳಿಗೆ ಪುಸ್ತಕಗಳು ಮತ್ತು ಅಗತ್ಯ ಕಲಿಕಾ ಸಾಮಗ್ರಿಗಳನ್ನು ಉಚಿತವಾಗಿ ನೀಡಲಾಯಿತು.

ಕಾರ್ಯಕ್ರಮಕ್ಕೆ ಮಂಗಲ್ಪಾಡಿ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಸಾಕ್ಷಿ ಶೆಟ್ಟಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಗ್ರಾಮ ವಿಕಸನ ಕಲಾ ವೇದಿಕೆ ಮಂಗಲ್ಪಾಡಿ ಅಧ್ಯಕ್ಷ ಶ್ರೀ ಕಿಶೋರ್ ಕುಮಾರ್ ಮಂಗಲ್ಪಾಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಡಾ. ಬಿ.ಆರ್. ಅಂಬೇಡ್ಕರ್ ಕಲಾ ಸಂಘದ ಅಧ್ಯಕ್ಷ ಶ್ರೀ ಶಿವಪ್ರಸಾದ್ ಶಾಂತಿಮೂಲೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಸಂಘದ ಅಧ್ಯಕ್ಷೆ ಶ್ರೀಮತಿ ಸಾವಿತ್ರಿ ಕುಬಣೂರು ಉಪಸ್ಥಿತರಿದ್ದರು.

ಕಲಾ ಸಂಘದ ಸದಸ್ಯ ಶ್ರೀ ಸದಾನಂದ ಕುಬಣೂರು ಶುಭಾಶಂಸನೆಗೈದರೆ, ಸದಸ್ಯೆ ಕು. ಸುನಿಶಾ ಕುಮಾರಿ ವಿದ್ಯಾರ್ಥಿಗಳ ಪಟ್ಟಿಯನ್ನು ವಾಚಿಸಿದರು. ಸದಸ್ಯ ಶ್ರೀ ವಿಶ್ವನಾಥ ಕುಬಣೂರು ಸ್ವಾಗತಿಸಿದರು. ಮಹಿಳಾ ಸಂಘದ ಸದಸ್ಯೆ ಶ್ರೀಮತಿ ರವಿಕಲ ಕುಬಣೂರು ವಂದಿಸಿದರು.

ಪುಸ್ತಕ ವಿತರಣೆಯ ಬಳಿಕ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಣೆ ಮಾಡಲಾಗಿದ್ದು, ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!