ಪುತ್ತೂರಿನಲ್ಲಿ ಪಂಚ ಗ್ಯಾರಂಟಿ ಪ್ರಗತಿ ಪರಿಶೀಲನಾ ಸಭೆ

ಪುತ್ತೂರು: ಪುತ್ತೂರು ತಾಲೂಕು ಮಟ್ಟದ ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಉಮಾನಾಥ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಪ್ರಗತಿ ಪರಿಶೀಲನಾ ಸಭೆ ಪುತ್ತೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದ್ದು, ಯೋಜನೆಗಳನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವ ಕುರಿತು ಮಾರ್ಗಸೂಚಿಗಳನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾದ ನವೀನ್ ಭಂಡಾರಿ ಉಪಸ್ಥಿತರಿದ್ದರು. ಜೊತೆಗೆ ಪುತ್ತೂರು ತಾಲೂಕು ಪ್ರಾಧಿಕಾರದ ಸದಸ್ಯರು ಮತ್ತು ಪಂಚ ಗ್ಯಾರಂಟಿ ಅನುಷ್ಠಾನಕ್ಕೆ ಸಂಬಂಧಿಸಿದ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!