ಬಾಳಿಯೂರು: ಶ್ರೀ ಅಯ್ಯಪ್ಪ ಭಜನಾ ಮಂದಿರ ಬಾಳಿಯೂರಿನಲ್ಲಿ ನಡೆಯುತ್ತಿರುವ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಶಿಬಿರದ ಅವಧಿಯನ್ನು ವಿಸ್ತರಿಸಲಾಗಿದೆ.
ಶಿಬಿರದ ಫಲಾನುಭವಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬಹುಜನರ ಅಪೇಕ್ಷೆಯ ಮೇರೆಗೆ ಇನ್ನಷ್ಟು ಜನರಿಗೆ ಇದರ ಪ್ರಯೋಜನ ದೊರಕಲೆಂದು ಶಿಬಿರವನ್ನು ಮೇ 27, 2026ರ ಬುಧವಾರದವರೆಗೆ ಮುಂದುವರಿಸಲು ವ್ಯವಸ್ಥಾಪಕರು ತೀರ್ಮಾನಿಸಿದ್ದಾರೆ.
ಆರೋಗ್ಯ ಸಂಬಂಧಿತ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಈ ಥೆರಪಿ ಸಹಕಾರಿಯಾಗುತ್ತಿದೆ ಎಂದು ಶಿಬಿರದಲ್ಲಿ ಭಾಗವಹಿಸಿದವರು ಅಭಿಪ್ರಾಯಪಟ್ಟಿದ್ದಾರೆ. ಶಿಬಿರದಲ್ಲಿ ಭಾಗವಹಿಸಲು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವುದು ಆಯೋಜಕರಿಗೆ ಸಂತಸ ತಂದಿದೆ.
ಆಸಕ್ತರು ಈ ಉಚಿತ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ವ್ಯವಸ್ಥಾಪಕರು ಮನವಿ ಮಾಡಿದ್ದಾರೆ. ಶಿಬಿರದ ಕೊನೆಯ ದಿನಾಂಕ ಮೇ 27, 2026 ಆಗಿದೆ.